ಕುರಿಯಾಳ ಕೇದ್ರಿಗದ್ದೆ ರಸ್ತೆ ಶಿಲಾನ್ಯಾಸ ನೆರೆವೇರಿಸಿದ ಮಾಜಿ ಸಚಿವ ರಮಾನಾಥ ರೈ…

ಬಂಟ್ವಾಳ: ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಕೇದ್ರಿಗದ್ದೆ ರಸ್ತೆಯ ಕಾಂಕ್ರಿಟೀಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ ಇವರು ಸುಮಾರು 3 ಲಕ್ಷ ಅನುದಾನ ಒದಗಿಸಿದ್ದು ಈ ಕಾಂಕ್ರೀಟಿಕರಣ ರಸ್ತೆಯ ಶಿಲಾನ್ಯಾಸವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ನೆರೆವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ವಲೇರಿಯನ್ ಪಿಂಟೋ, ಗಣೇಶ ಶೆಟ್ಟಿ, ಕೇಶವ,ಶೇಖರ ಹಾಗೂ ಕುರಿಯಾಳ ಕೇದ್ರಿಗದ್ದೆ ನಾಗರೀಕರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button