ನ.25 – ಜಿಲ್ಲಾಧಿಕಾರಿ ಕಚೇರಿಯಲ್ಲಿ ತುಂಬೆ ನೂತನ ಡ್ಯಾಮ್ ಸಂತ್ರಸ್ತ ರೈತರ ಸಭೆ…
ಬಂಟ್ವಾಳ: ತುಂಬೆ ನೂತನ ಡ್ಯಾಂ ಮುಳುಗಡೆ ಪ್ರದೇಶಕ್ಕೆ ವರತೆ ಪ್ರದೇಶ ಸೇರಿಸಿ ಪರಿಹಾರ ನೀಡುವ ಕುರಿತು ಚರ್ಚಿಸಲು ನ. 25ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ.
ಈಗಾಗಲೇ ನ್ಯಾಯೋಚಿತ ಸೂಕ್ತ ಪರಿಹಾರ ದೊರೆಯದೆ ಇರುವುದರ ಬಗ್ಗೆ ಹಾಗೂ ಸಂತ್ರಸ್ತರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ಬಗ್ಗೆ ಕ್ರಮ ಕೈಗೊಳ್ಳುವರೇ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳು ಹಾಗೂ ಸಂತ್ರಸ್ತ ರೈತರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎo. ಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ.