ಆದಿತ್ಯವಾರ – ದ.ಕ 48 ಹಾಗೂ ರಾಜ್ಯದಲ್ಲಿ 1291 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಆದಿತ್ಯವಾರ) ದ.ಕ ಜಿಲ್ಲೆಯಲ್ಲಿ 48 ಹಾಗೂ ರಾಜ್ಯದಲ್ಲಿ 1291 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 48 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31896 ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಒಟ್ಟು 714 ಮಂದಿ ಬಲಿಯಾಗಿದ್ದಾರೆ.ಇಂದು 38 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1291 ಮಂದಿಗೆ ಕೊರೋನ ಪಾಸಿಟಿವ್ ಪತ್ತೆಯಾಗಿವೆ . 1530 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 847612 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 24503 ಆಗಿದೆ.ಇಂದು 15 ಮಂದಿ ಸಾವನ್ನಪ್ಪಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11765 ಆಗಿದೆ.