ಬಂಟ್ವಾಳ – ಗ್ರಾಮ ಸ್ವರಾಜ್ಯ ಸಮಾವೇಶ…
ಬಂಟ್ವಾಳ: ದೇಶದಲ್ಲಿ ತುಷ್ಟೀಕರಣ ನೀತಿಯ ರಾಜಕಾರಣ ಮಾಡುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಅವನತಿ ಕಂಡಿದೆ. ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಲ್ಲಿ ಪ್ರತೀ ಗ್ರಾಮ ಪಂಚಾಯಿತಿನಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಹೇಳಿದರು.
ಇಲ್ಲಿನ ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ‘ಗ್ರಾಮ ಸ್ವರಾಜ್ಯ ಸಮಾವೇಶ’ದಲ್ಲಿ ಅವರು ಮಾತನಾಡಿದರು. ಈ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಶ್ರಮ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಕಳೆದ 75 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಕೇವಲ ಗಾಂಧಿ ಹೆಸರು ಹೇಳಿಕೊಂಡು ಜನತೆಗೆ ಟೋಪಿ ಹಾಕಿ ಅವರ ಕಾರ್ಯಕರ್ತರನ್ನು ಕೂಡ ಕಡೆಗಣಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಕಂಡ ಕನಸು ‘ರಾಮರಾಜ್ಯ’ ನನಸು ಮಾಡುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಜಿಟಲ್ ಇಂಡಿಯಾ, 18ಸಾವಿರ ಗ್ರಾಮಗಳಿಗೆ ವಿದ್ಯುತ್, 12ಕೋಟಿ ಮನೆಗಳಿಗೆ ಉಜ್ವಲ ಅಡುಗೆ ಅನಿಲ, ಶೌಚಾಲಯ ನಿಮರ್ಾಣ, ನರೇಗಾ ಯೋಜನೆಯಡಿ ಗರಿಷ್ಟ ಮೊತ್ತದ ಅನುದಾನ ನೀಡಿದ್ದಾರೆ. 14ನೇ ಹಣಕಾಸು ಯೋಜನೆಯಡಿ ಪ್ರತೀ ಗ್ರಾಮ ಪಂಚಾಯಿತಿಗೆ ರೂ 1 ಕೋಟಿಯಂತೆ ಒಟ್ಟು 31ಸಾವಿರ ಕೋಟಿ ಮೊತ್ತದ ಅನುದಾನ ಒದಗಿಸಿದ್ದಾರೆ ಎಂದರು.
ಶೀಘ್ರವೇ ಜಿಲ್ಲೆಯ ರೈತರಿಗೆ ಕುಮ್ಕಿ ಜಮೀನಿನ ಹಕ್ಕು, ಪ್ರತ್ಯೇಕ ಮರಳು ನೀತಿ, ಬಡವರಿಗೆ ವಸತಿ ಮತ್ತು ಹಕ್ಕುಪತ್ರ ಸಮಸ್ಯೆ ನಿವಾರಣೆ, ಡ್ರಗ್ಸ್ ಮುಕ್ತ ಕಾಲೇಜು ಕ್ಯಾಂಪಸ್, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಲವ್ ಜಿಹಾದ್ ನಿಯಂತ್ರಣಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಮಂಗಳೂರಿನಲ್ಲಿ ದೇಶದ್ರೋಹಿ ಗೋಡೆಬರಹ ಬರೆದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲು ಗೃಹ ಸಚಿವರು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಬಿಜೆಪಿ ಎಲ್ಲಾ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ಕಾರ್ಯಕರ್ತರಿಗೆ ಗೌರವ ತಂದು ಕೊಟ್ಟ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಹಾಲಿ ಪ್ರಧಾನಿ ನರೇಂದ್ರ ಮೋದಿಗೆ ಹೋಲಿಸಿದರೆ ಕಾಂಗ್ರೆಸ್ ಸಾಧನೆ ಶೂನ್ಯ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೊಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಯ 228 ಗ್ರಾಮ ಪಂಚಾಯಿತಿನಲ್ಲಿ 148 ಸ್ಥಾನ ಹೊಂದಿರುವ ಬಿಜೆಪಿ ಶೇ.90ರಷ್ಟು ಗೆಲುವು ಸಾಧಿಸಬೇಕು. ರಾಜ್ಯದಲ್ಲಿ ಶೇ.80ರಷ್ಟು ಗೆಲುವಿಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಕೋಲಾರ ಸಂಸದ ಮುನಿಸ್ವಾಮಿ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ ಮಾತನಾಡಿದರು.
ರಾಜ್ಯ ಮಹಿಳಾ ಮೋಚರ್ಾ ಅಧ್ಯಕ್ಷೆ ಗೀತಾ ವಿವೇಕಾನಂದ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಪ್ರಮುಖರಾದ ಗೋಪಾಲಕೃಷ್ಣ ಹೇರಳೆ, ಉದಯ ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ರೈ ಬೋಳಿಯಾರು, ಭರತೇಶ್, ರಾಜೇಶ್ ಕಾವೇರಿ, ತಿಲಕ್ ರಾಜ್, ಚಂದ್ರಹಾಸ ಪಂಡಿತ್ ಹೌಸ್, ವಿಜಯ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಪ್ರ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿ, ಸುನಿಲ್ ಆಳ್ವ ವಂದಿಸಿದರು. ಬಿ.ದೇವದಾಸ ಶೆಟ್ಟಿ ಪ್ರಾರ್ಥಿಸಿದರು. ರಾಮದಾಸ ಬಂಟ್ವಾಳ್ ಕಾರ್ಯಕ್ರಮ ನಿರೂಪಿಸಿದರು.
ಆರಂಭದಲ್ಲಿ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಗಣ್ಯರನ್ನು ಕರೆತರಲಾಯಿತು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಮಲ್ಲಿಕಾ ಎಸ್.ಭಂಡಾರಿ, ಹಿರಿಯ ಸಹಕಾರಿ ಟಿ.ಜಿ.ರಾಜಾರಾಮ ಭಟ್ ಮತ್ತಿತರರು ಇದ್ದರು. ಇದೇ ವೇಳೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ್ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಲಾಯಿತು.