ಕರ್ನಾಟಕ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ…
ಬೆಂಗಳೂರು: 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದ್ದು ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ.
ಪಶು ಸಂಗೋಪನೆ ಮತ್ತು ವಕ್ಪ್ ಸಚಿವ ಪ್ರಭು ಚೌವ್ಹಾಣ್ ವಿಧೇಯಕ ಮಂಡನೆಗೆ ಆರಂಭಿಸುತಿದ್ದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಆರೋಪ ಪ್ರತ್ಯಾರೋಪ ನಡೆಯಿತು ಸಭೆಯಲ್ಲಿ ಗದ್ದಲದ ವಾತಾವರಣ ಏರ್ಪಟ್ಟಿತು. ಗದ್ದಲದ ನಡುವೆಯೇ ಪ್ರಭು ಚೌವ್ಹಾಣ್ ವಿಧೇಯಕ ಮಂಡಿಸಿದರು.
ಸದನದಲ್ಲಿ ಗದ್ದಲದ ನಡುವೆಯೇ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಗಳ ಮತ್ತು ಕೆಲವು ಇತರೆ ತಿದ್ದುಪಡಿ ವಿಧೇಯಕಗಳನ್ನೂ ಮಂಡನೆ ಮಾಡಲಾಯಿತು. ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ವಿಧೇಯಕವನ್ನು ಮಂಡಿಸಿದರು. ಸದನದಲ್ಲಿ ಯಾವೊಬ್ಬ ಶಾಸಕರೂ ವಿಧೇಯಕದ ಬಗ್ಗೆ ಚರ್ಚೆ ನಡೆಸದ ಹಿನ್ನಲೆಯಲ್ಲಿ ಸ್ಪೀಕರ್ ಧ್ವನಿಮತದ ಮೂಲಕ ವಿಧೇಯಕ ಪರ್ಯಾಲೋಚನೆ ಪ್ರಸ್ತಾವನೆ ಮಂಡಿಸಿ, ಅನುಮೋದನೆ ನೀಡಿದರು.