ಬಂಟ್ವಾಳ – ಫಿಟ್ ಇಂಡಿಯಾ ಶಾಲಾ ಸಪ್ತಾಹಕ್ಕೆ ಚಾಲನೆ…
ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ದೈಹಿಕ ಶಿಕ್ಷಕರ ಸಂಘ ಬಂಟ್ವಾಳ ಇದರ ಸಹಯೋಗದಲ್ಲಿ ಫಿಟ್ ಇಂಡಿಯಾ ಶಾಲಾ ಸಪ್ತಾಹ ನವ ಭಾರತ ಸದೃಢ ಭಾರತ ನಿರ್ಮಾಣಕ್ಕೆ ಬಿ ಸಿ ರೋಡಿನ ಬಿ.ಇ.ಒ.ಕಚೇರಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಫಿಟ್ ಇಂಡಿಯಾ ಶಾಲಾ ಸಪ್ತಾಹಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಚಾಲನೆ ನೀಡಿದರು. ಬಳಿಕ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಫಿಟ್ ಇಂಡಿಯಾ ಸಪ್ತಾಹ ಎಂಬುದು ಒಂದು ದಿನಕ್ಕೆ ಸೀಮಿತವಾಗಿರದೆ ನಿರಂತರವಾಗಿ ನಡೆಯಬೇಕು.
ಕ್ರೀಡೆಯಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗಬಾರದು , ಕ್ರೀಡೆಯು ಮಾನಸಿಕ, ದೈಹಿಕದ ಜೊತೆಯಲ್ಲಿ ವಿದ್ಯಾರ್ಥಿಗಳ ಪಠ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಸಭಾ ಕಾರ್ಯಕ್ರಮವನ್ನು ತಾ.ಪಂ.ಕಾರ್ಯನಿರ್ವಾಣಾಧಿಕಾರಿ ರಾಜಣ್ಣ ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ಮಾನಸಿಕವಾಗಿ, ದೈಹಿಕ ವಾಗಿ ಸದೃಡವಾಗಬೇಕಾದರೆ ದೈಹಿಕ ಶಿಕ್ಷಕರ ಪಾತ್ರ ಹಿರಿದು.
ಆ ನಿಟ್ಟಿನಲ್ಲಿ ಸರಕಾರದ ಯೋಜನೆ ಯಶಸ್ವಿಯಾಗಬೇಕಾದರೆ ಶಿಕ್ಷಕರ ಜೊತೆ ವಿದ್ಯಾರ್ಥಿಗಳ ಪಾಲುದಾರಿಕೆ ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ಮಾಣಿ ಬಾಲವಿಕಾಶ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಪ್ರಹ್ಲಾದ್ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ರತ್ನಾವತಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೆರಾವು, ಪ್ರಾ.ಶಾ.ಶಿ.ಅಧ್ಯಕ್ಷ ಶಿವಪ್ರಸಾದ್,ಎನ್.ಪಿ.ಎಸ್.ಸಂಘದ ಅಧ್ಯಕ್ಷ ಸಂತೋಷ್, ಭಡ್ತಿ ಹೊಂದಿದ ಪ್ರೌ.ಶಾ.ಶಿ.ಸಂಘದ ಅಧ್ಯಕ್ಷ ಲೋಕೇಶ್, ದೈಹಿಕ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಜಗದೀಶ್, ಗ್ರೇಡ್ 1 ದೈಹಿಕ ಶಿಕ್ಷಕರ ಅಧ್ಯಕ್ಷ ಜತ್ತಪ್ಪ ಗೌಡ, ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಇಂದುಶೇಖರ, ಶಿಕ್ಷಣ ಸಂಯೋಜಕಿಯರಾದ ಸುಜಾತ,ಸುಧಾ, ಯುವಜನ ಸೇವಾ ಕ್ರೀಡಾಧಿಕಾರಿ ನವೀನ್ ಪಿ.ಎಸ್. ಪಾಣೆಮಂಗಳೂರು ಶಾರದಾ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಭೊಜ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಜಯರಾಮ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ ಸ್ವಾಗತಿಸಿದರು. ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಜಗದೀಶ್ ವಂದಿಸಿದರು.
ಶಿಕ್ಷಕ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.