ಅಪಘಾತದಲ್ಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಣೆ…

ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆಯ ವಿಜಯೋತ್ಸವದ ಸಂದರ್ಭದಲ್ಲಿ ಗೋಳ್ತಮಜಲು ಗ್ರಾಮದ ನೆಟ್ಲದಲ್ಲಿ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಕಾರ್ಯಕರ್ತ ನರೇಶ್ ಇವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರಾದ ದೇವರಾಜ್ ಕರಿಂಗಾಣ ಹಾಗೂ ಸತೀಶ್ ನಾಯ್ಕ್ ಕಜೆ ಇವರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

F5752371 C420 4329 9a37 C947c8c3a416 300x200

078c5fa7 01b0 488f B07d 9186259f16fa 300x200

Related Articles

Leave a Reply

Your email address will not be published. Required fields are marked *