ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು- ಎಂಬಿಎ ವಿಭಾಗಕ್ಕೆ ಸತತ ಮೂರನೇ ವರ್ಷವೂ ಶೇ.100% ಫಲಿತಾಂಶ…

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿವೇಕಾನಂದ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್‍ನ 2018-20 ವರ್ಷದ ಎಂಬಿಎ ವಿದ್ಯಾರ್ಥಿಗಳು 100% ಫಲಿತಾಂಶದ ದಾಖಲೆಯನ್ನು ಮುಂದುವರಿಸಿದ್ದಾರೆ. ಆಗಸ್ಟ್ – 2020 ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲ್ಲಿ ಎಂಬಿಎ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ.
ಇದರಲ್ಲಿ 57% ವಿದ್ಯಾರ್ಥಿಗಳು ವಿಶಿಷ್ಟ ಪ್ರಥಮ ಶ್ರೇಣಿಯಲ್ಲಿ ಮತ್ತು ಉಳಿದ 43% ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಳೆದ 2 ವರ್ಷವೂ ಸಹ ಎಂಬಿಎ ವಿಭಾಗವು 100% ಫಲಿತಾಂಶ ದಾಖಲಿಸಿತ್ತ್ತು. 2018-20 ಪರೀಕ್ಷೆಗಳಲ್ಲಿ ವಿದ್ಯಾರ್ಥಿನಿಯರಾದ ಶಮಾ ಪ್ರಣಮ್ಯ ಪ್ರಥಮ ಸ್ಥಾನವನ್ನು ಹಾಗು ಫಾತಿಮತ್ ಸುಹೈಲಾ ಜಬೀನ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ, ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್.ಎಸ್.ಅಯ್ಯರ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಈ ಶೈಕ್ಷಣಿಕ ವರ್ಷದಿಂದ ತರಗತಿ ಕೊಠಡಿಗಳನ್ನು ಹವಾನಿಯಂತ್ರಿತದೊಂದಿಗೆ ನವೀಕರಿಸಲಾಗಿದೆ ಹಾಗು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುವುದು ಮತ್ತು ವಿನೂತನ ಕಾರ್ಪೊರೇಟ್ ಉಡುಪು ಮಾದರಿಯ ಸಮವಸ್ತ್ರವನ್ನು ಪರಿಚಯಿಸಲಾಗುವುದೆಂದು ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಸೂಚನೆ: ಈ ವರ್ಷ PGCET ಅಥವಾ KMAT ಪ್ರವೇಶ ಪರೀಕ್ಷೆಯನ್ನು ಬರೆಯದವರೂ ಸಹ ಎಂಬಿಎ ಕೋರ್ಸಿಗೆ ಸೇರಬಹುದಾಗಿದೆ. ಇದಕ್ಕಾಗಿ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕೆಲವೇ ಸೀಟುಗಳು ಉಳಿದಿದ್ದು ಆಸಕ್ತ ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಕಾಲೇಜನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 08251-235244, 9740547365 ಮತ್ತು 9686618954.

Sponsors

Related Articles

Leave a Reply

Your email address will not be published. Required fields are marked *

Back to top button