ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಮಾಹಿತಿ ಕಾರ್ಯಾಗಾರ…
ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟ ಹಾಗೂ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು ನವದೆಹಲಿ ಇದರ ಸಂಯುಕ್ತ ಆಶ್ರಯದಲ್ಲಿ ‘ವ್ಯವಹಾರಗಳ ಬಗ್ಗೆ ತಿಳುವಳಿಕೆ ಮತ್ತು ಅದರ ನೋಂದಣಿ’ ಎನ್ನುವ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು.
ಮಂಗಳೂರಿನ ಹಿರಿಯ ಲೆಕ್ಕಪರಿಶೋಧನಾಧಿಕಾರಿ ಗಣೇಶ್ ರಾವ್ ಪಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನೆರೆದ ವಿದ್ಯಾರ್ಥಿ ಸಮೂಹವನ್ನು ಉದ್ದೇಶಿಸಿದ ಅವರು ವ್ಯಾಪಾರ ಎಂದರೇನು, ವ್ಯವಹಾರದ ವೈಶಿಷ್ಟ್ಯಗಳು ಮತ್ತು ಅದರ ರೂಪಗಳು, ವ್ಯಾಪಾರದ ನೋಂದಣಿ, ಜಿಎಸ್‍ಟಿ ನೋಂದಣಿ, ಮಾರುಕಟ್ಟೆ ಕಾರ್ಯತಂತ್ರ, ವ್ಯಾಪಾರದ ನೋಂದಣಿಗೆ ಸಹಕಾರಿಯಾಗುವ ಆನ್ಲೈನ್ ಸೈಟುಗಳು, ಬೇಕಾದ ಅಗತ್ಯ ದಾಖಲೆಗಳು, ಮೂಲ ತಿಳುವಳಿಕೆಗಳು. ಪಾಲುದಾರರು ಮತ್ತು ಹೂಡಿಕೆದಾರರ ನಡುವಿನ ವ್ಯತ್ಯಾಸ ಮತ್ತು ಉಳಿತಾಯ ಖಾತೆ ಹಾಗೂ ಚಾಲ್ತಿ ಖಾತೆಗಳ ನಡುವಿನ ವ್ಯತ್ಯಾಸದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ವಹಿಸಿದ್ದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ಪ್ರೊ.ಸುನಿಲ್ ಲಕ್ಕುಂಡಿ ಸ್ವಾಗತಿಸಿ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ..ಜಯಕೃಷ್ಣ ವಂದಿಸಿದರು. ಪ್ರೊ.ಲತಾ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.