ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮ…

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಶಿವಪಾರ್ವತಿ ಜ್ಞಾನವಿಕಾಸ ಕೇಂದ್ರ ಗೋಳ್ತಮಜಲು ಇದರ ಸಹಯೋಗದಲ್ಲಿ ನಿಟಿಲೇಶ್ವರ ದೇವಸ್ಥಾನದ ವಠಾರದಲ್ಲಿ ಸರಕಾರಿ ಸೌಲಭ್ಯಗಳ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರಾದ ಶಿವಪ್ಪಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಬಟ್ಯಪ್ಪ ಶೆಟ್ಟಿ ರವರು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು .ಮುಖ್ಯ ಅತಿಥಿಗಳಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲದ ಯೋಜನಾಧಿಕಾರಿ ಶ್ರೀ ಪಿ ಚೆನ್ನಪ್ಪ ಗೌಡ ಆಯುಷ್ಮಾನ್ ಕಾರ್ಡ್ ಉಪಯೋಗದ ಬಗ್ಗೆ ಹಾಗೂ ನೆಟ್ ವರ್ಕ್ ಆಸ್ಪತ್ರೆಗಳ ಬಗ್ಗೆ ತಿಳಿಸಿದರು.
.ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಗೀತ ಶರ್ಮ ರವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯಕ್ರಮ ಗಳನ್ನು ಶ್ಲಾಘಿಸಿದರು .ತಾಲ್ಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ನಳಿನಾಕ್ಷಿ ಶೆಟ್ಟಿ ಮೇಲ್ವಿಚಾರಕಿ ಸವಿತಾ ಕುಮಾರಿ ,ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು , ಭವ್ಯ ಸ್ವಾಗತಿಸಿ , ಹೇಮಲತಾ ಧನ್ಯವಾದವಿತ್ತರು ಸೇವಾ ಪ್ರತಿನಿಧಿ ಶ್ರೀಮತಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು