ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ….

ಮೂಡುಬಿದ್ರಿ: ದೇಶದಲ್ಲಿ ಸುಮಾರು 34 ವರ್ಷಗಳ ಬಳಿಕ ಜಾರಿಯಾಗಲಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP ) ಇದರ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಜ. 23 ರಂದು ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಆರ್. ಜಿ. ಡಿಸೋಜಾ ಅವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP ) ಬಗ್ಗೆ ಸವಿವರವಾದ ಮಾಹಿತಿ ನೀಡಿದರು.
ನೂತನ ಶಿಕ್ಷಣ ನೀತಿಯಲ್ಲಿರುವ ಪ್ರಮುಖಾಂಶಗಳನ್ನು ಡಾ. ಆರ್. ಜಿ. ಡಿಸೋಜಾ ಅವರು ವಿವರಿಸಿ, ಇನ್ನು ಮುಂದೆ 10+2 ಶಿಕ್ಷಣ ವ್ಯವಸ್ಥೆ ಇರುವುದಿಲ್ಲ. ಇದನ್ನು 5+3+3+4 ರಂತೆ ವಿಂಗಡನೆ ಮಾಡಲಾಗಿದೆ. ಇದರರ್ಥ ಶಾಲೆಯ ಮೊದಲ ಐದು ವರ್ಷಗಳು ಅಡಿಪಾಯ ಹಂತ, 3 ರಿಂದ 5 ನೇ ತರಗತಿಯವರೆಗಿನ ಮೂರು ವರ್ಷಗಳನ್ನು ಪೂರ್ವಸಿದ್ಧತಾ ಹಂತವಾಗಿ ವಿಂಗಡಿಸಲಾಗಿದೆ. ನಂತರ ಮೂರು ವರ್ಷಗಳು ಮಧ್ಯಮ ಹಂತವಾಗಿ ವಿಂಗಡಿಸಲಾಗಿದೆ. ನಂತರದ ನಾಲ್ಕು ವರ್ಷವನ್ನು ದ್ವಿತೀಯ ಹಂತವನ್ನಾಗಿ ವಿಂಗಡಿಸಲಾಗಿದೆ. ಶಾಲೆಗಳು ಕಲೆ, ವಾಣಿಜ್ಯ, ವಿಜ್ಞಾನದ ಎಂಬ ಯಾವುದೇ ಕಟ್ಟುನಿಟ್ಟಿನ ರಚನೆಯನ್ನು ಹೊಂದಿರುವುದಿಲ್ಲ, ವಿದ್ಯಾರ್ಥಿಗಳು ತಾವು ಬಯಸುವ ಯಾವುದೇ ಕೋರ್ಸ್‌ಗಳನ್ನು ತೆಗೆದುಕೊಳ್ಳಬಹುದು. ವಿದ್ಯಾರ್ಥಿಗಳಿಗೆ 5ನೇ ತರಗತಿಯವರೆಗೆ ಮಾತೃ ಭಾಷೆಯಲ್ಲಿ ಶಿಕ್ಷಣ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಬೇಕು. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವನ್ನು ಶಿಕ್ಷಣ ಸಚಿವಾಲಯ ಎಂದು ಮರು ನಾಮಕರಣ ಮಾಡಲಾಗಿದೆ. ಬೋರ್ಡ್ ಪರೀಕ್ಷೆಗಳ ಮಹತ್ವ ಕಡಿಮೆ ಮಾಡುವುದು, ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು. ಮಾರ್ಕ್ಸ್ ಕಾರ್ಡ್‌ಗಳು ಕೇವಲ ಅಂಕಗಳಿಗೆ ಸೀಮಿತವಾಗಿರದೆ ಕೌಶಲ್ಯ ಮತ್ತು ಸಾಮರ್ಥ್ಯಗಳ ಕುರಿತು ಸಮಗ್ರ ಮಾಹಿತಿಯೂ ಸಿಗಲಿದೆ. ಪ್ರತಿ ವಿದ್ಯಾರ್ಥಿ ಒಂದು ಕೌಶಲ್ಯವನ್ನು ಕಲಿಯಲೇಬೇಕು. ವಯಸ್ಕರಿಗೆ ಆ್ಯಪ್ ,ಆನ್ ಲೈನ್, ಟಿವಿ , ಆನ್ ಲೈನ್ ಬುಕ್ ಗಳ ಮೂಲಕ ಕಲಿಕೆಗೆ ಅವಕಾಶ ನೀಡುವುದು. ಪ್ರಾದೇಶಿಕ ಭಾಷೆಗಳಲ್ಲಿ ಇ- ಕಂಟೆಂಟ್ ಪೂರೈಕೆ ಮಾಡುವುದು. ಮಧ್ಯದಲ್ಲಿ ಕೋರ್ಸ್ ಬಿಡಲು ಬಯಸುವರಿಗೆ ಪ್ರವೇಶ ಮತ್ತು ನಿರ್ಗಮನ ಆಯ್ಕೆ ನೀಡಿದೆ. ಉನ್ನತ ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ ಏಕರೂಪದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.

ಕ್ಯಾಂಪಸ್ ನ ಆಡಳಿತಾಧಿಕಾರಿ ಶಾಹಿದ್, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button