ಸುದ್ದಿ

ಬಿಗ್ ಬಾಸ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ…

ಬೆಂಗಳೂರು: ‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ ಜನಪ್ರಿಯಗೊಂಡಿದ್ದ ಜಯಶ್ರೀ ರಾಮಯ್ಯ, ಇಂದು (ಜ.25) ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಉಪ್ಪು ಹುಳಿ ಖಾರ’, ‘ಕನ್ನಡ್‌ ಗೊತ್ತಿಲ್ಲ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಜಯಶ್ರೀ ರಾಮಯ್ಯ, ಬೆಂಗಳೂರಿನ ಮಾಗಡಿ ರಸ್ತೆಯ ಗೊಲ್ಲರಹಟ್ಟಿಯ ಪ್ರಗತಿ ಬಡಾವಣೆಯಲ್ಲಿರುವ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಬಹಳ ದಿನಗಳಿಂದ ಜಯಶ್ರೀ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಕಳೆದ ವರ್ಷ ಜುಲೈ ತಿಂಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ ರಾಮಯ್ಯ, ತಮ್ಮ ಫೇಸ್ ಬುಕ್ ನಲ್ಲಿ “ಖಿನ್ನತೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು. ಅಲ್ಲದೆ ಈ ಪೋಸ್ಟ್ ಹಾಕಿದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಯಶ್ರೀಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮತ್ತೊಂದು ಬಾರಿ ದಯ ಮರಣ ದಯಪಾಲಿಸಿ ಎಂದು ಅಂಗಲಾಚಿಕೊಂಡಿದ್ದರು. ಆದಾಗ ಬಳಿಕ ಕೇಶ ಮುಂಡನ ಮಾಡಿಕೊಂಡು ಮತ್ತೆ ಸುದ್ದಿಯಲ್ಲಿದ್ದರು.

Advertisement

Related Articles

Leave a Reply

Your email address will not be published. Required fields are marked *

Back to top button