ಒಡಿಯೂರು ಶ್ರೀಗಳ 60 ರ ಷಷ್ಠ್ಯಬ್ದ ಪ್ರಯುಕ್ತ ಸುಳ್ಯದಲ್ಲಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ…

ಸುಳ್ಯ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಗಳವರ 60 ರ ಷಷ್ಠ್ಯಬ್ದ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ
ಸುಳ್ಯ ತಾಲೂಕು ಷಷ್ಠ್ಯಬ್ದ ಸಂಭ್ರಮ ಸಮಿತಿಯ ಆಶ್ರಯದಲ್ಲಿ ನಡೆಯುವ ಸರಣಿ ಕಾರ್ಯಕ್ರಮಗಳ ಉದ್ಘಾಟನೆಯು ಜ.26 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಒಡಿಯೂರು ಗುರುದೇವಾನಂದ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯೀ ಯವರು ಹನುಮಾನ್ ಚಾಲೀಸ್ ಪಠಣೆಯೊಂದಿಗೆ ಷಷ್ಠ್ಯಬ್ದ ಕಾರ್ಯಕ್ರಮದ ರೂಪು ರೇಷೆಗಳ ಹಾಗೂ ಕಾರ್ಯಕ್ರಮದ ಉದ್ದೇಶದ ವಿವರವನ್ನು ನೀಡಿದರು.
ತಾಲೂಕು ಸಂಘಟನಾ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಕಳಂಜ ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ಸಮಿತಿಯ ಉಪಾಧ್ಯಕ್ಷ ಎನ್. ಎ.ರಾಮಚಂದ್ರ, ನ್ಯಾಯವಾದಿ ಜಯಪ್ರಕಾಶ್ ರೈ ಸುಳ್ಯ,ಕೇಂದ್ರ ಸಮಿತಿ ಕೋಶಾಧಿಕಾರಿ ಸುರೇಶ್ ರೈ, ತಾಲೂಕು ಸಮಿತಿ ಕಾರ್ಯಾಧ್ಯಕ್ಷ ಕೆ.ಟಿ.ವಿಶ್ವನಾಥ, ಕೋಶಾಧಿಕಾರಿ ಕೆ.ರಾಧಾಕೃಷ್ಣ ಪಕ್ಕಳ ಉಪಸ್ಥಿತರಿದ್ದರು. ಜೆ.ಕೆ.ರೈ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಬಿ.ಪುಷ್ಪರಾಜ ಗಾಂಭೀರ ವಂದಿಸಿದರು. ಗಣೇಶ್ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿದರು. ಒಡಿಯೂರು ಸ್ವಾಮೀಜಿಯ ಭಕ್ತರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button