ನಾಯಿಯನ್ನು ಹಿಡಿಯಲು ಬಂದ ಚಿರತೆ ಶೌಚಾಲಯದಲ್ಲಿ ಲಾಕ್…..

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ರೇಗಪ್ಪ ಎಂಬವರ ಮನೆಯ ನಾಯಿಯನ್ನು ಹಿಡಿಯಲು ಓಡಿಸಿಕೊಂಡು ಬಂದ ಚಿರತೆ ನಾಯಿ ಜೊತೆಗೇ ಟಾಯ್ಲೆಟ್ ಒಳಗಡೆ ಬಂಧಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.
ಚಿರತೆಯನ್ನು ಗಮನಿಸಿದ ಮನೆಯವರು ಬಾಗಿಲು ಹಾಕಿದ್ದು ಚಿರತೆ ಮತ್ತು ನಾಯಿ ಟಾಯ್ಲೆಟ್ ಒಳಗಡೆ ಬಂಧಿಯಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲಾಗುವುದು ಎಂದು ತಿಳಿದು ಬಂದಿದೆ. ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿಸಿದ್ದಾರೆ.