ಬಂಟ್ವಾಳ – ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ…
ಬಂಟ್ವಾಳ: ತಾ.ಪಂ.ನಿಂದ ಬಿಡುಗೆಯಾದ ಕೋಟಿ ಅನುದಾನಗಳ ಕಾಮಗಾರಿಗಳು ಫೆಬ್ರವರಿ ಅಂತ್ಯದೊಳಗೆ ಮುಗಿಸುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಸೂಚಿಸಿದರು.
ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ತಾ.ಪಂ.ನ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.
ಕಾರ್ಮಿಕ ಇಲಾಖೆಯಿಂದ ಸಿಗುವ ಪಿಂಚಣಿ ಯೋಜನೆ ಸರಿಯಾಗಿ ಫಲಾನುಭವಿಗಳಿಗೆ ಸಿಗುವಂತಾಗಲು ಪ್ರತಿ ಗ್ರಾಮ ಪಂಚಾಯಗಳಿಗೆ ಅಧಿಕಾರಿಗಳು ತೆರಳಿ ಸರಿಯಾಗಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು. ಸರಕಾರದ ವಿವಿಧ ಮಾಶಾಸನಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎಂಬ ಅನೇಕ ಫಲಾನುಭವಿಗಳ ದೂರುಗಳು ಬಂದಿದ್ದು ಈ ಬಗ್ಗೆ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದ ತಾ.ಪಂ ಅಧ್ಯಕ್ಷ ರು ಈ ಬಗ್ಗೆ ಕ್ರಮಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ಬಳಿಕ ತಾಲೂಕಿನ ಎಲ್ಲಾ ಹಾಸ್ಟೆಲ್ ಗಳು ಶುರುವಾಗಿದೆ ಎಂದು ಸಮಾಜ ಕಲ್ಯಾಣ ಅಧಿಕಾರಿ ಸಭೆಯಲ್ಲಿ ತಿಳಿಸಿದರು.
ಮೆಸ್ಕಾಂ ಇಲಾಖೆ ಸಭೆಯಲ್ಲಿ ಗೈರು ಹಾಜರಾಗಿದ್ದ ಬಗ್ಗೆ ಗರಂ ಆದ ಆದ್ಯಕ್ಷರು ಶಿಕ್ಷಣ ಇಲಾಖೆ, ಕೃಷಿ ಇಲಾಖೆ ಸಹಿತ ಅನೇಕ ಇಲಾಖೆ ಮಾಸಿಕ ಕೆಡಿಪಿ ಸಭೆಯ ರಿಪೋರ್ಟ್ ಕೊಟ್ಟಿಲ್ಲ ಯಾಕೆ ಎಂದು ಸಭೆಯಲ್ಲಿ ಪ್ರಶ್ನಿಸಿದರು. ಟಾರ್ಗೆಟ್ ತಕ್ಕಂತೆ ಅನುದಾನ ಬಿಡುಗಡೆಯಾದ ಹಣವನ್ನು ನಿಗದಿತ ಅವದಿಯಲ್ಲಿ ಖರ್ಚು ಮಾಡಿ ಕಾಮಗಾರಿಯನ್ನು ಮುಗಿಸುವಂತೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸುವಂತೆ ತಾ.ಪಂ.ಇ.ಒ.ರಾಜಣ್ಣ ತಿಳಿಸಿದರು.
ಉಪಾಧ್ಯಕ್ಷ ಅಬ್ಬಾಸ್ ಆಲಿ ಸಭೆಯಲ್ಲಿ ಮಾತನಾಡಿ ಖಾಸಗಿ ಶಾಲೆಗಳ ದಾಖಲಾತಿ ಸಂದರ್ಭ ಪಡಯುವ ಶುಲ್ಕದಲ್ಲಿ ಶೇ. 30 ರಿಯಾಯಿತಿ ನೀಡಿದೆ. ಆದರೆ ಕೆಲವು ಶಾಲೆಗಳಲ್ಲಿ ರಿಯಾಯಿತಿ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಎಲ್ಲಾ ಶಾಲೆಗಳಲ್ಲಿ ಸರಕಾರದ ಆದೇಶಗಳು ಅನುಷ್ಠಾನ ಮಾಡುವಂತೆ ಶಿಕ್ಷಣ ಇಲಾಖೆಯ ಬಿ.ಇ.ಒ.ಜ್ಞಾನೇಶ್ ಗೆ ತಿಳಿಸಿದರು.