ಅಪಘಾತ – ತುಳು ಅಕಾಡೆಮಿ ಅಧ್ಯಕ್ಷರಿಗೆ ಗಾಯ…

ಮಂಗಳೂರು: ಕಾರು ಹಾಗೂ ಮೀನಿನ ಲಾರಿ ನಡುವೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ.
ಇಂದು ಬೆಳಿಗ್ಗೆ 5.15 ರ ಸುಮಾರಿಗೆ ಕತ್ತಲ್ ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದು, ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿಗೆ ಡಿಕ್ಕಿ ಹೊಡೆದಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕತ್ತಲ್ ಸಾರ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

3e7fdd56 Dc74 4c26 8b5f 770831a17d2f 300x288

Related Articles

Leave a Reply

Your email address will not be published. Required fields are marked *