ಬಂಟ್ವಾಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ…
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ನಿರ್ಮಾಣಗೊಂಡ ಕನ್ನಡ ಭವನ, ಸಾರ್ವಜನಿಕ ರಂಗಮಂದಿರ ಲೋಕಾರ್ಪಣೆ ಹಾಗೂ ಡಾ.ಸುರೇಶ್ ನೆಗಳಗುಳಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಫೆ.20ರಂದು ಕನ್ನಡ ಭವನ ಲೋಕಾರ್ಪಣೆ ಹಾಗೂ 21ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಹಲವು ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಸಂದರ್ಭ ಮಾತನಾಡಿದ ಶಾಸಕ ನಾಯ್ಕ್, ಕನ್ನಡ ಭವನದಲ್ಲಿ ಸಾಹಿತ್ಯಿಕ ಚಟುವಟಿಕೆಗಳು ನಡೆದು ಸದಾ ಕ್ರಿಯಾಶೀಲವಾಗಲಿ ಎಂದು ಹಾರೈಸಿದರು.
ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಸ್ವಾಗತ ಸಮಿತಿ ಅಧ್ಯಕ್ಷ ಐತಪ್ಪ ಆಳ್ವ ಬಿ.ಸಿ.ರೋಡ್, ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ಗೌರವ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಕನ್ನಡ ಭವನ ನಿರ್ಮಾಣ ಸಮಿತಿ ಖಜಾಂಚಿ ಎನ್.ಶಿವಶಂಕರ್ ಕೈಕುಂಜೆ, ಕಸಾಪ ಮಾರ್ಗದರ್ಶಕರಾದ ಕೈಯೂರು ನಾರಾಯಣ ಭಟ್, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ವಿ.ಸು.ಭಟ್, ಡಿ.ಬಿ.ಅಬ್ದುಲ್ ರಹಿಮಾನ್ ತುಂಬೆ, ಅನಾರು ಕೃಷ್ಣ ಶರ್ಮ, ಗೀತಾ ಎಸ್.ಕೊಂಕೋಡಿ, ಕಸಾಪ ಖಾಯಂ ಆಹ್ವಾನಿತರಾದ ಸರಪಾಡಿ ಅಶೋಕ್ ಶೆಟ್ಟಿ, ರಮಾನಂದ ನೂಜಿಪ್ಪಾಡಿ, ಮಹಾಬಲೇಶ್ವರ ಹೆಬ್ಬಾರ, ಮೋಹನ್ ಕೆ.ಶ್ರೀಯಾನ್ ರಾಯಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.