ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೃಢಕಲಶ-ಪೂರ್ವಭಾವಿ ಸಭೆ…

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ದೃಢಕಲಶದ ಪೂರ್ವಭಾವಿಯಾಗಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ತಾಲೂಕಿನ ಅಧಿಕಾರಿಗಳೊಂದಿಗೆ ಕ್ಷೇತ್ರದ ಆಡಳಿತ ಸಮಿತಿಯ ಸಭೆ ಶ್ರೀ ಕ್ಷೇತ್ರದಲ್ಲಿ ನಡೆಯಿತು.
ದೃಢಕಲಶದ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಕೋವಿಡ್‍ನ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ದೇವಿಯ ದರ್ಶನ ಕಲ್ಪಿಸುವ ಬಗ್ಗೆ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸೂಚಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆ,ಚೇರ ಸೂರ್ಯನಾರಾಯಣ ರಾವ್, ತಹಶೀಲ್ದಾರ್ ರಶ್ಮಿ,ಸರ್ಕಲ್ ಇನ್ಸ್‍ಪೆಕ್ಟರ್ ನಾಗರಾಜ್, ಜಿಲ್ಲಾ ಧಾರ್ಮಿಕ ಪರಿಷತ್‍ನ ಸದಸ್ಯ ಗಿರೀಶ್ ತಂತ್ರಿ, ಪವಿತ್ರಪಾಣಿ ಮಾಧವ ಭಟ್, ಆರ್ಚಕ ರಾಮ್ ಭಟ್, ಗ್ರಾಮಾಂತ್ರರ ಎಸ್.ಐ ಪ್ರಸನ್ನ, ತಾಲೂಕು ಆರೋಗ್ಯಧಿಕಾರಿ ದೀಪಾ ಪ್ರಭು, ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಪ್ರಮುಖರಾದ ಕೃಷ್ಣರಾಜ್ ಮಾರ್ಲ, ಭುವನೇಶ್ ಪಚ್ಚಿನಡ್ಕ, ವೆಂಕಟೇಶ್ ನಾವಡ, ಸುಬ್ರಯ್ಯ ಕಾರಂತ, ವಿದ್ಯಾ ಚರಣ್ ಭಂಡಾರಿ, ಸಂಪತ್ ಕುಮಾರ್ ಶೆಟ್ಟಿ,ಬೂಡಾ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಪಾಣೆಮಂಗಳೂರು ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button