ಖ್ಯಾತ ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ಭಂಡಾರಿ ನಿಧನ…

ಪುತ್ತೂರು: ತೆಂಕುತಿಟ್ಟು ಯಕ್ಷಗಾನ ರಂಗದ ಖ್ಯಾತ ಕಲಾವಿದ ಡಾ ಶ್ರೀಧರ್ ಭಂಡಾರಿ(73 ) ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬನ್ನೂರು ನಿವಾಸಿಯಾಗಿದ್ದ ಡಾ ಶ್ರೀಧರ ಭಂಡಾರಿ 2019ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ಅವರು ಧಿಗಿಣ ವೀರ ಎಂದೇ ಪ್ರಖ್ಯಾತಿ ಗಳಿಸಿದ್ದರು.
ಸುಮಾರು ಒಂದು ವರ್ಷದ ಹಿಂದೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ ಅವರು ಇದೀಗ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲಾ, ಶಾಂತನಾ, ಪುತ್ರರಾದ ಡಾ ಅನಿಲ, ದೇವಿ ಪ್ರಕಾಶ್ ಮತ್ತು ಮೊಮ್ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

3 300x200 Download Maxresdefault 300x169

Related Articles

Leave a Reply

Your email address will not be published. Required fields are marked *