ಫೆ. 27 – ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ YEN QUEST 2021…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ YEN QUEST 2021 ಫೆಬ್ರವರಿ 27 ರಂದು ಏರ್ಪಡಿಸಲಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ವಿಜ್ಞಾನ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ – ತಂತ್ರಜ್ಞಾನ ಮತ್ತು ನಾವೀನ್ಯತೆ ವಿಭಾಗದಲ್ಲಿ ಪೋಸ್ಟರ್ ಪ್ರಸೆಂಟೇಷನ್ ಸ್ಪರ್ಧೆ ಮತ್ತು ವಿಶೇಷ ಆಕರ್ಷಣೆಯಾಗಿ ಕರೋಕೆ ಸ್ಪರ್ಧೆ ಆಯೋಜಿಸಲಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಆಕರ್ಷಕ ಬಹುಮಾನಗಳು ಹಾಗೂ ವಿದ್ಯಾರ್ಥಿವೇತನವನ್ನು ಗೆಲ್ಲಬಹುದಾಗಿದೆ ಎಂದು ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ತಿಳಿಸಿದ್ದಾರೆ.

19c85e43 B964 42cd 8e1e 398ef225ee85 300x200

Related Articles

Leave a Reply

Your email address will not be published. Required fields are marked *