ನೆಲ್ಯಾಡಿ – ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ…
ಕಡಬ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡ ಘಟನೆ ನೆಲ್ಯಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಮತ್ತು ಕೋಲಾರದಿಂದ ಮಂಗಳೂರಿಗೆ ಹೋಗುತ್ತಿದ್ದ ಡೀಸೆಲ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಎರಡೂ ವಾಹನದ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.