ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ YEN QUEST 2021…
ಮೂಡುಬಿದ್ರಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ YEN QUEST 2021 ಇಂದು (ಫೆ. 27 ) ರಂದು ನಡೆಯಿತು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ವಿಜ್ಞಾನ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ – ತಂತ್ರಜ್ಞಾನ ಮತ್ತು ನಾವೀನ್ಯತೆ ವಿಭಾಗದಲ್ಲಿ ಪೋಸ್ಟರ್ ಪ್ರಸೆಂಟೇಷನ್ ಸ್ಪರ್ಧೆ ಮತ್ತು ವಿಶೇಷ ಆಕರ್ಷಣೆಯಾಗಿ ಕರೋಕೆ ಸ್ಪರ್ಧೆ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ಸುಮಾರು 46 ಕಾಲೇಜುಗಳನ್ನು ಆಹ್ವಾನಿಸಲಾಗಿತ್ತು ಮತ್ತು 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜನರಲ್ ಸೈನ್ಸ್ ರಸಪ್ರಶ್ನೆ, ಕರೋಕೆ , ಪೋಸ್ಟರ್ ಮೇಕಿಂಗ್ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ, ವಿದ್ಯಾರ್ಥಿವೇತನ ಮತ್ತು ಇತರ ಬಹುಮಾನಗಳೊಂದಿಗೆ ಪ್ರೋತ್ಸಾಹಿಸಲಾಯಿತು. ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ, ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.