‘ಜನಧ್ವನಿ’ ಜಾಥಾದ ರಾಜ್ಯ ಸಂಯೋಜಕ ಮತ್ತು ಜಾಥಾದ ನಿರ್ವಹಣೆ ಸಮಿತಿಯ ಸದಸ್ಯರಾಗಿ ಟಿ.ಎಂ.ಶಹೀದ್ ನೇಮಕ…
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾ. 3 ರಿಂದ ಆರಂಭಗೊಳ್ಳಲಿರುವ ‘ಜನಧ್ವನಿ’ ಜಾಥಾದ ರಾಜ್ಯ ಸಂಯೋಜಕ ಮತ್ತು ಜಾಥಾದ ನಿರ್ವಹಣೆ ಸಮಿತಿಯ ಸದಸ್ಯರಾಗಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಈ ನೇಮಕ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅನುಭವ ಹೊಂದಿರುವ ಟಿ.ಎಂ.ಶಹೀದ್ ಅವರ ಪಕ್ಷ ಸಂಘಟನಾ ಸಾಮರ್ಥ್ಯವನ್ನು ಪರಿಗಣಿಸಿ ಈ ನೇಮಕವಾಗಿದೆ. ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಕೂಡ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಟಿ.ಎಂ.ಶಾಹೀದ್ ಅವರ ಪರಿಚಯ:
ಪ್ರತಿಷ್ಠಿತ ತೆಕ್ಕಿಲ್ ಮನೆತನದ ದಿ| ತೆಕ್ಕಿಲ್ ಮಹಮ್ಮದ್ ಹಾಜಿ ಯವರ ಪುತ್ರ ಟಿ.ಎಂ.ಬಾಬಾ ಹಾಜಿ ತೆಕ್ಕಿಲ್ ಹಾಗೂ ಕ್ಯಾಲಿಕಟ್ ನ ರಾಜಕೀಯ ಮತ್ತು ಜಮಿಂದಾರ ರಾಗಿರುವ ನಾರಾನತ್ ಕುಟುಂಬದ ಆಯಿಷ ಹಜ್ಜುಮ್ಮ ರವರ ಪುತ್ರ ನಾಗಿರುವ ಟಿ.ಎಂ.ಶಾಹೀದ್ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜಕೀಯಕ್ಕೆ ದುಮುಕಿದವರು. 1988-89 ರಲ್ಲಿ ನೆಹರೂ ಸ್ಮಾರಕ ಕಾಲೇಜಿನ NSUI ನ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ,1989-90 ರಲ್ಲಿ NSUI ನ ಸುಳ್ಯ ತಾಲೂಕಿನ ಪ್ರಧಾನ ಕಾರ್ಯದರ್ಶಿಯಾಗಿ,1991-93 ರಲ್ಲಿ NSUI ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 1993-94 ರಲ್ಲಿ NSUI ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, 1994-96 ರಲ್ಲಿ NSUI ನ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ,1996-98 ರಲ್ಲಿ NSUI ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದುಡಿದಿರುತ್ತಾರೆ. 1998-2010 ರವರೆಗೆ ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, 2010-15 ವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, 2017 ರಿಂದ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾವೇರಿ ಜಿಲ್ಲೆಯ ಹಿರೆಕ್ಕೆರೂರು ವಿಧಾನ ಸಭಾ ಕ್ಷೇತ್ರ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ.
1995-2000 ರಾಜೀವ ಗಾಂಧಿ ಯುವ ಶಕ್ತಿ ಮತ್ತು ಗ್ರಾಮೀಣಾಭಿವೃದ್ಧಿ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಟಿ.ಎಂ.ಶಾಹೀದ್ ಅವರು ಅತೀ ಕಿರಿಯ ವಯಸ್ಸಿನಲ್ಲಿ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ನ ಅಧ್ಯಕ್ಷರಾಗಿ , ಅರಂತೋಡು ಬದ್ರೀಯಾ ಜುಮ್ಮಾ ಮಸೀದಿಯ ಪುನರ್ ರ್ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಷಿಯೇಷನ್ ಅರಂತೋಡು ಇದರ ಗೌರವ ಅಧ್ಯಕ್ಷರಾಗಿ , ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಮತ್ತು 2000 ನೇ ಇಸವಿಯಲ್ಲಿ ಸುಳ್ಯ ತಾಲೂಕು ಅಲ್ಪ ಸಂಖ್ಯಾತರ ವಿವಿದ್ದೋಶ ಸಹಕಾರಿ ಸಂಘದ ಪ್ರಥಮ ಚುನಾಯಿತ ಅಧ್ಯಕ್ಷರಾಗಿ ಸತತ ಏಳುವರೆ ವರ್ಷ ಕರ್ತವ್ಯ ನಿರ್ವಹಿಸಿದ್ದರು. ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ ದುಡಿದಿರುವ ಶಾಹೀದ್ ಅವರು ಪ್ರಸ್ತುತ ಕರ್ನಾಟಕ ರಾಜ್ಯದ ರಾಜೀವ್ ಯೂತ್ ಪೌಂಡೇಷನ್ ನ ಅಧ್ಯಕ್ಷರಾಗಿರುತ್ತಾರೆ. 2002ರಲ್ಲಿ ರಾಜ್ಯ ಯುವ ಪ್ರಶಸ್ತಿಯನ್ನು ಶಾಹೀದ್ ಅವರು ಪಡೆದಿರುತ್ತಾರೆ.
ಶ್ರೀಯುತರು ಪ್ರಸ್ತುತ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದಾರೆ. 2018 ರಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಸಮಾಜ ಸೇವಾ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.