ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಕ್ರಿಕೆಟ್ ಮತ್ತು ತ್ರೋಬಾಲ್ ಟೂರ್ನಮೆಂಟ್…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಯೆನೆಪೋಯ ಸಮೂಹ ಸಂಸ್ಥೆಗಳ ಉದ್ಯೋಗಿಗಳಿಗಾಗಿ ಕ್ರಿಕೆಟ್ ಮತ್ತು ತ್ರೋಬಾಲ್ ಟೂರ್ನಮೆಂಟ್ ’11 ನೇ ನೆಹರು ಕಪ್’ ನ್ನು ಮಾ.21 ರಂದು ಆಯೋಜಿಸಲಾಗಿತ್ತು.
ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಫೈನಾನ್ಸ್ ಆಫೀಸರ್ ಮೊಹಮ್ಮದ್ ಬಾವ ಮುಖ್ಯ ಅತಿಥಿಗಳಾಗಿದ್ದರು. ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಲೋಕೇಶ್ ವಂದಿಸಿದರು.
ಕ್ರಿಕೆಟ್ ಪಂದ್ಯಾಟದಲ್ಲಿ ಯೆನೆಪೋಯ ಸ್ಪೆಷಾಲಿಟಿ ಹಾಸ್ಪಿಟಲ್ ತಂಡ ಪ್ರಥಮ ಹಾಗೂ ಯೆನೆಪೋಯ ಇಂಜಿನಿಯರಿಂಗ್ ಕಾಲೇಜು ತಂಡ ರನ್ನರ್ಸ್ ಪ್ರಶಸ್ತಿ ಪಡೆದರೆ, ತ್ರೋಬಾಲ್ ಪಂದ್ಯದಲ್ಲಿ ಯೆನೆಪೋಯ ಸ್ಪೆಷಾಲಿಟಿ ಹಾಸ್ಪಿಟಲ್ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು.