ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಎಂಬಿಎ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ ವಿತರಣೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಉಚಿತವಾಗಿ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಪಿ. ಮಾತನಾಡಿ ಎಂಬಿಎಯಂತಹ ಸ್ನಾತಕೋತ್ತರದ ಕಲಿಕೆಯು ವ್ಯಕ್ತಿಯೊಬ್ಬನ ಜೀವನದ ಗತಿಯನ್ನು ಬದಲಾಯಿಸುತ್ತದೆ ಎಂದರು. ಹೆಚ್ಚಿನ ಜ್ಞಾನ ಮತ್ತು ನಾಯಕತ್ವ ಗುಣಗಳನ್ನು ಒದಗಿಸುವುದರ ಜತೆಯಲ್ಲಿ ಕಾರ್ಪೊರೇಟ್ ಜಗತ್ತಿನ ಪರಿಚಯವನ್ನು ಮಾಡಿಕೊಡುತ್ತವೆ. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯನ್ನು ಇನ್ನೂ ಹೆಚ್ಚಿಸುವುದಕ್ಕಾಗಿ ಈ ಲ್ಯಾಪ್‍ಟಾಪ್‍ಗಳು ಸಹಕಾರಿಯಾಗಲಿವೆ ಎಂದರು.
ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ. ಮಾತನಾಡಿ ಮುಂದಿನ ದಿನಗಳಲ್ಲಿ ದೊಡ್ಡ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳನ್ನು ಮುನ್ನಡೆಸುವ ಮಹತ್ತರ ಜವಾಬ್ಧಾರಿಯನ್ನು ಹೊಂದುವ ನೀವು ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಇದರಿಂದ ಸಂಸ್ಥೆಗೂ ನಿಮಗೂ ಏಳಿಗೆಯಾಗುತ್ತದೆ. ಕಾಲೇಜಿನ ವಿವಿಧ ಸವಲತ್ತುಗಳನ್ನು ಬಳಸಿಕೊಂಡು ಉತ್ತಮರಾಗುವುದರ ಜತೆಗೆ ಸಮಾಜದ ಉನ್ನತಿಗಾಗಿ ಶ್ರಮಿಸಬೇಕು ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರುಗಳಾದ ರವಿಕೃಷ್ಣ ಡಿ ಕಲ್ಲಾಜೆ, ಸುಬ್ರಮಣ್ಯ ಭಟ್ ಟಿ.ಎಸ್. ವಿತರಣಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್ ಎಸ್ ಅಯ್ಯರ್ ಸ್ವಾಗತಿಸಿ, ಪ್ರೊ. ರಾಕೇಶ್ ಎಂ ವಂದಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button