ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿ- ಲಾರಿ ಚಾಲಕ ಸಜೀವ ದಹನ…

ಕಡಬ : ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿಹೊಡೆದ ಪರಿಣಾಮ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಮಾರ್ಚ್ 24 ರ ತಡರಾತ್ರಿ ನಡೆದಿದೆ.
ಘಟನೆಯ ಪರಿಣಾಮ ಬಸ್ ಸಂಪೂರ್ಣ ಭಸ್ಮಗೊಂಡಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಬೆಂಕಿ ಆವರಿಸುತ್ತಲೇ ಬಸ್ ನಿಂದ ಕೆಳಗಿಳಿದು ಪ್ರಯಾಣಿಕರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ – ಲಾರಿ ಗಳೆರಡೂ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಲಾರಿಯಿಂದ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದಾರೆ. ಈ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.

E8019489 5a0e 4fd3 B50e 7e679a431d64 300x225

Related Articles

Leave a Reply

Your email address will not be published. Required fields are marked *