ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ರಕ್ಷಕ, ಶಿಕ್ಷಕ ಸಮಾವೇಶ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಜಿಯಲ್ಲಿ ರಕ್ಷಕ-ಶಿಕ್ಷಕ ಸಮಾವೇಶವು ನಡೆಯಿತು.
ಕಾಲೇಜಿನ ಪೇರೆಂಟ್ ರಿಲೇಶನ್ ಸೆಲ್‍ನ ಸಹಯೋಗದೊಂದಿಗೆ ವಿಶ್ವೇಶ್ವರಯ್ಯ ಸಭಾ ಭವನದಲ್ಲಿ ನಡೆದ ಈ ಸಭೆಯಲ್ಲಿ 2020-21ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ಭಾಗವಹಿಸಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮೂಲ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ರಮಾನಂದ ಕಾಮತ್ ಎಂ ಅವರು ಮಕ್ಕಳ ಹಾಜರಾತಿ, ಆಂತರಿಕ ಪರೀಕ್ಷೆಯ ಅಂಕಗಳ ಮಹತ್ವ, ಸೆಮಿಸ್ಟರ್ ಪರೀಕ್ಷಾ ವಿಧಾನ ಮತ್ತು ಹೆಚ್ಚುವರಿ ತರಗತಿಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ನಂತರ ಕಾಲೇಜು ಆಡಳಿತ ಮಂಡಳಿ ಮತ್ತು ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ. ಮಕ್ಕಳ ಹಾಗೂ ಹೆತ್ತವರ ಕೋರಿಕೆಯನ್ನು ಮನ್ನಿಸಿ ಸೆಮಿಸ್ಟರಿನ ಕೊನೆಯಲ್ಲಿ ಪುನರಾವರ್ತನ ತರಗತಿಗಳನ್ನು ನಡೆಸಲಾಗುತ್ತದೆ. ಇದಕ್ಕೆ ಹಾಜರಾಗುವ ಮೂಲಕ ವಿದ್ಯಾರ್ಥಿಗಳು ತಮ್ಮ ಅನುಮಾನಗಳನ್ನು ಪರಿಹರಿಸಿಕೊಳ್ಳಬಹುದು ಎಂದರು. ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಪನ್ಯಾಸಕ ಸಲಹೆಗಾರರನ್ನು ನೇಮಿಸಲಾಗಿದ್ದು ಯಾವುದೇ ಸಮಸ್ಯೆಗಳಿಗೆ ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ ಕಲ್ಲಾಜೆ ಮಾತನಾಡಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಎಲ್ಲಾ ಅಗತ್ಯ ಸವಲತ್ತುಗಳನ್ನು ನೀಡುತ್ತದೆ. ಅದರ ಸಮರ್ಪಕ ಬಳಕೆಯನ್ನು ಮಾಡುವ ನಿಟ್ಟಿನಲ್ಲಿ ಪೋಷಕರೂ ತಮ್ಮ ಮಕ್ಕಳಿಗೆ ಸೂಚನೆಗಳನ್ನು ನೀಡಬೇಕು. ವಿದ್ಯಾರ್ಥಿಯ ಬೆಳವಣಿಗೆಗೆ ಮತ್ತು ಸಂಸ್ಥೆಯ ಉನ್ನತಿಗೆ ನಿಮ್ಮ ಸಲಹೆ ಮತ್ತು ಸೂಚನೆಗಳು ಅಗತ್ಯವಾಗಿದ್ದು ಅದಕ್ಕಾಗಿ ಈ ಸಭೆಯನ್ನು ನಡೆಸಲಾಗಿದೆ. ನಿಮ್ಮ ಮಕ್ಕಳ ಏಳಿಗೆಗೆ ನಮ್ಮ ಉಪನ್ಯಾಸಕ ವೃಂದವು ಸದಾ ಸಿದ್ದರಾಗಿದ್ದು ಅವರನ್ನು ಭೇಟಿ ಮಾಡಿ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕು ಎಂದರು.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಪಿ., ನಿರ್ದೇಶಕ ಸುಬ್ರಮಣ್ಯ ಭಟ್ ಟಿ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೂಲವಿಜ್ಞಾನ ವಿಭಾಗದ ಪ್ರೊ.ಶ್ವೇತಾಂಬಿಕಾ ಸ್ವಾಗತಿಸಿ, ಪ್ರೊ.ಶ್ರೀಶರಣ್ಯ ವಂದಿಸಿದರು. ಡಾ.ಪ್ರಸಾದ್ ಎನ್ ಬಾಪಟ್ ಕಾರ್ಯಕ್ರಮ ನಿರ್ವಹಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button