ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫಾರ್ಮೇಶನ್ ಸೈನ್ಸ್ ವಿಭಾಗಗಳು ಆಯೋಜಿಸಿದ್ದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನ ಉದ್ಘಾಟನೆ ಮಾ.29 ರಂದು ನಡೆಯಿತು.
‘ಮೊಬೈಲ್ ಅಪ್ಲಿಕೇಶನ್ ಡೆವಲಪ್ಮೆಂಟ್ ‘ ಎಂಬ ವಿಷಯದಲ್ಲಿ ನಡೆಯಲಿರುವ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು. .
ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್‌ಟಿಇ) ಮತ್ತು ಕಂಪ್ಯೂಟರ್ ಸೊಸೈಟಿ ಆಫ್ ಇಂಡಿಯಾ (ಸಿಎಸ್‌ಐ) ಸಹಯೋಗದೊಂದಿಗೆ ಈ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ಏರ್ಪಡಿಸಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿನ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ವ್ಯವಸ್ಥಾಪಕ ಅಶ್ವಿನ್ ಅರೋಲಿ ಮುಖ್ಯ ಅತಿಥಿಯಾಗಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ್ ಶೆಟ್ಟಿ ಮತ್ತು ಕುಮಾರಿ ಶ್ರೇಯಾ, ಆಂಡ್ರಾಯ್ಡ್ ಡೆವಲಪರ್ಸ್, ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕರಾದ ಪ್ರೊ. ಮಂಜುನಾಥ್ ರಾಯ್ಕಾರ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯಕ್ರಮದ ಇನ್ನೋರ್ವ ಸಂಯೋಜಕಿ ಪ್ರೊ. ರಶ್ಮಿ ಪಿ.ಸಿ. ಕೃತಜ್ಞತೆ ಸಲ್ಲಿಸಿದರು. ಪ್ರೊ.ಐಶ್ವರ್ಯ ಡಿ ಕಾರ್ಯಕ್ರಮ ನಿರೂಪಿಸಿದರು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಡಾ. ವೆಂಕಟೇಶ್ ಎಸ್, ಇನ್ಫಾರ್ಮೇಶನ್ ಸೈನ್ಸ್ ವಿಭಾಗ ಮುಖ್ಯಸ್ಥ ಡಾ.ಕೀರ್ತಿಕುಮಾರ್ ಎಚ್.ಎಂ ಉಪಸ್ಥಿತರಿದ್ದರು. ಎರಡೂ ವಿಭಾಗಗಳ ಉಪನ್ಯಾಸಕರು ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನಲ್ಲಿ ಪಾಲ್ಗೊಂಡಿದ್ದರು.

0dff3bbd 5ec2 4ee0 91a6 F37547bb857c 300x200 73197dac 207f 403a Addc Cb9313aa3149 300x200

Related Articles

Leave a Reply

Your email address will not be published. Required fields are marked *