ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್‌ಟಿಇ) ಸಹಯೋಗದಲ್ಲಿ ಆಯೋಜಿಸಿದ್ದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನ ಉದ್ಘಾಟನೆ ಮಾ.30 ರಂದು ನಡೆಯಿತು.
‘ಮಾಡೆಲಿಂಗ್ ಆಪ್ಟಿಮೈಸೇಶನ್ & ಅನಾಲಿಸಿಸ್ ಆಫ್ ಇಂಜಿನಿಯರಿಂಗ್ ಪ್ರಾಬ್ಲೆಮ್ಸ್ ಯೂಸಿಂಗ್ ಸಾಫ್ಟ್ ಕಂಪ್ಯೂಟಿಂಗ್ ಟೆಕ್ನಿಕ್ಸ್’ ಎಂಬ ವಿಷಯದಲ್ಲಿ ನಡೆಯಲಿರುವ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ಅಸೋಸಿಯೇಟ್ ಪ್ರೊಫೆಸರ್ ಗಳಾದ ಡಾ. ವಿಜಯ್ ಜಿ.ಎಸ್. ಮತ್ತು ಡಾ.ಸಿದ್ದಪ್ಪ ಐ. ಬಿ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ಕಾರ್ಯಕ್ರಮ ಸಂಯೋಜಕರಾದ ಪ್ರೊ.ರಾಘವೇಂದ್ರ ಬಾಳಿಗಾ, ಪ್ರೊ. ಪುನೀತ್ ಎಚ್.ಎಸ್ ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥ ಡಾ. ಸತೀಶ ಎನ್ ಸ್ವಾಗತಿಸಿದರು. ಪ್ರೊ.ರವೀಂದ್ರ ನಾಯ್ಕ್ ಮತ್ತು ಪ್ರೊ.ಜಗನೇಶ್ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಅನ್ಫಾಸ್ ಮುಕ್ರಂ ಕೃತಜ್ಞತೆ ಸಲ್ಲಿಸಿದರು. ಪ್ರೊ.ಸುಜಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರು ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನಲ್ಲಿ ಪಾಲ್ಗೊಂಡಿದ್ದರು.