ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ನರಿಕೊಂಬುವಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ…

ಬಂಟ್ವಾಳ: 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿಮಾನಿಗಳಾದ ಶ್ರೀಮಾನ್ ದೇಜಪ್ಪ ಕೋಡಿ,ವಿಶ್ರಾಂತ ತಾಲೂಕು ಪಂಚಾಯಿತಿ ಅಧಿಕಾರಿ ನೆರವೇರಿಸಿದರು. ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ತಾಳ ಬದ್ಧವಾದ ಕವಾಯತು ಮೂಡಿಬಂದವು.ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕಲಿಕೆಯಲ್ಲಿ ಪ್ರತಿಭಾನ್ವಿತರಾದ ವಿದ್ಯಾರ್ಥಿಗಳಿಗೆ ರೀಮಾ ಮಧುರಾಜ್ ಇವರು ನೀಡಿದ ಧನ ಸಹಾಯವನ್ನೂ ನೀಡಲಾಯಿತು. ವಿವಿಧ ಸಂಘ ಸಂಸ್ಥೆಗಳು ನೀಡಿದ ಸಿಹಿತಿಂಡಿಯನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್,ಉಪಾಧ್ಯಕ್ಷ ಉಷ್ಲಾಲಾಕ್ಷಿ,ಹಾಗೂ ಸರ್ವ ಸದಸ್ಯರು, ತಾಯಂದಿರ ಸಮಿತಿಯ ಅಧ್ಯಕ್ಷಶ್ರೀಮತಿ ಜಯಶ್ರೀ,ಉಪಾಧ್ಯಕ್ಷರಾದ ಶ್ರೀಮತಿ ಪ್ರಿಯ,ಮಕ್ಕಳ ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರೇಮ ಸ್ವಾಗತಿಸಿ,ಶ್ರೀಮತಿ ಹಿರಣ್ಮಯೀ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button