ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವತಿಯಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್‌ಟಿಇ) ಮತ್ತು ಸೆಲ್ಕೋ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನ ಉದ್ಘಾಟನೆ ಮಾ.30 ರಂದು ನಡೆಯಿತು.
‘ಸೋಲಾರ್ ಎನರ್ಜಿ ಯುಟಿಲೈಸೇಷನ್ ಫಾರ್ ರೆಸಿಡೆನ್ಶಿಯಲ್ ಆಪ್ಲಿಕೇಷನ್ಸ್ ‘ ಎಂಬ ವಿಷಯದಲ್ಲಿ ನಡೆಯಲಿರುವ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಸೆಲ್ಕೋ ಫೌಂಡೇಶನ್ ನ ಕಾರ್ಯಕ್ರಮ ಸಂಯೋಜಕ ಅಶ್ವಿನ್ ಎಂ. ಅತಿಥಿಗಳಾಗಿ ಭಾಗವಹಿಸಿದ್ದರು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ಕಾರ್ಯಕ್ರಮ ಸಂಯೋಜಕರಾದ ಪ್ರೊ.ಆಶಿತಾ, ಪ್ರೊ. ಪ್ರವೀಣ್ ಜಿ ಬಿ ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥ ಪ್ರೊ.ಪ್ರಸನ್ನ ಕುಮಾರ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಪ್ರೊ. ಸುಧೀರ್ ಕೃತಜ್ಞತೆ ಸಲ್ಲಿಸಿದರು. ಪ್ರೊ.ಕೃಪಾ ಟಿ ಕಾರ್ಯಕ್ರಮ ನಿರೂಪಿಸಿದರು. ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರು ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನಲ್ಲಿ ಪಾಲ್ಗೊಂಡಿದ್ದರು.