ಕಡಬ – ಯುವತಿ ಆತ್ಮಹತ್ಯೆ…

ಕಡಬ : ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ತನ್ನ ಮನೆ ಸಮೀಪ ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ . ಕಡಬದ ಬೈಕ್ ಶೋರೂಂ ಒಂದರಲ್ಲಿ ದೀಕ್ಷಾ ಕೆಲಸ ನಿರ್ವಹಿಸುತ್ತಿದ್ದಳು ಎನ್ನಲಾಗಿದೆ . ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ . ಕಡಬ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.