ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವತಿಯಿಂದ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಆಯೋಜಿಸಿದ್ದ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಉದ್ಘಾಟನೆ ಏ. 8 ರಂದು ನಡೆಯಿತು.
‘ಪೈಥಾನ್ ಬಳಸಿ ಕೃತಕ ಬುದ್ಧಿಮತ್ತೆಯ ಉಪಯೋಗಗಳು'( Applications of Artificial Intelligence using Python) ಎಂಬ ವಿಷಯದಲ್ಲಿ ನಡೆಯಲಿರುವ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್‌ಟಿಇ) ಸಹಯೋಗದೊಂದಿಗೆ ಈ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಉದ್ಘಾಟನಾ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎನ್ಎಂಎಎಂಐಟಿ ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಬಾಲಾಜಿ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಎಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಪ್ರೊ. ಗಂಗಾಧರ ಸ್ವಾಗತಿಸಿದರು. ಪ್ರೊ. ರೆಬೇಕ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯಕ್ರಮ ಸಂಯೋಜಕರಾದ ಪ್ರೊ. ಎಸ್.ವಿ. ಪ್ರಸಾದ್ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದ ಇನ್ನೋರ್ವ ಸಂಯೋಜಕಿ ಪ್ರೊ.ನಾಝಿಯಾ ಕಾರ್ಯಕ್ರಮ ನಿರೂಪಿಸಿದರು.