ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್ ಅಂಗಾರ ನೇಮಕ….
ಸುಳ್ಯ: ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಬೆಳಗಾವಿ, ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ
ಉಮೇಶ್ ಕತ್ತಿ ಅವರಿಗೆ ಬಾಗಲಕೋಟೆ, ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಬೀದರ್, ಪೌರಾಡಳಿತ ಮತ್ತು ಸಕ್ಕರೆ ಸಚಿವ ಎನ್. ನಾಗರಾಜ್ ( ಎಂ.ಟಿ.ಬಿ) ಅವರಿಗೆ ಕೋಲಾರ, ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ರುದ್ರಪ್ಪ ನಿರಾಣಿ ಅವರಿಗೆ ಕಲಬುರಗಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.