ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ನಿಧನಕ್ಕೆ ಟಿ.ಎಂ.ಶಾಹೀದ್ ತೆಕ್ಕಿಲ್ ಸಂತಾಪ…

ಸುಳ್ಯ: ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷರಾದ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ಅವರ ನಿಧನಕ್ಕೆ ಅಖಿಲ ಭಾರತ ಬ್ಯಾರಿ ಪರಿಷತ್ ಕಾರ್ಯದರ್ಶಿ ಟಿ. ಎಂ. ಶಾಹೀದ್ ತೆಕ್ಕಿಲ್ ಸಂತಾಪ ವ್ಯಕ್ತ ಪಡಿಸಿರುತ್ತಾರೆ.
ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷರೂ, ಪಲ್ಲಮಜಲು ಜುಮಾ ಮಸೀದಿಯ ಮಾಜಿ ಅಧ್ಯಕ್ಷರೂ, ಹಲವು ಸಾಮಾಜಿಕ ಸಂಘ-ಸಂಸ್ಥೆಗಳ ಮೂಲಕ ತಮ್ಮ ವೃತ್ತಿಪರ ಜೀವನದ ನಿಬಿಡತೆಯ ನಡುವೆಯೂ ಸಮಾಜದಲ್ಲಿ ನೊಂದವರ ಪಾಲಿಗೆ ಸೇವಾ ಸಿಂಚನಗೈದು ಸಮಾಜಕ್ಕಾಗಿ ತಮ್ಮ ಜೀವನದ ಒಂದು ಭಾಗವನ್ನು ಮೀಸಲಾಗಿಸಿ, ಸಮಾಜ ಜೀವಿಯಾಗಿದ್ದ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ಅವರ ನಿಧನಕ್ಕೆ ಅಖಿಲ ಭಾರತ ಬ್ಯಾರಿ ಪರಿಷತ್ ಕಾರ್ಯದರ್ಶಿ ಹಾಗೂ ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹೀದ್ ತೆಕ್ಕಿಲ್ ಸಂತಾಪ ವ್ಯಕ್ತ ಪಡಿಸಿರುತ್ತಾರೆ.
ಟಿ. ಎಂ. ಶಾಹೀದ್ ತೆಕ್ಕಿಲ್