ಕೊರೊನಾಕ್ಕೆ ಸಂಬಂಧಿಸಿ ಟಾಸ್ಕ್ ಫೋರ್ಸ್ ಕೆಲಸ ತೃಪ್ತಿಕರವಾಗಿದೆ – ಶಾಸಕ ರಾಜೇಶ್ ನಾಯ್ಕ್…
ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯತಿಯಲ್ಲಿ ಒಟ್ಟು 7 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕೊರೊನಾಕ್ಕೆ ಸಂಬಂಧಿಸಿ ಟಾಸ್ಕ್ ಫೋರ್ಸ್ ಕೆಲಸ ತೃಪ್ತಿಕರವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.
ಬಾಳ್ತಿಲ ಗ್ರಾಪಂನಲ್ಲಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಹೊರಜಿಲ್ಲೆಯಿಂದ ಬಂದವರ ಪೈಕಿ ಒಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದರು
ಲಸಿಕೆ ಕುರಿತು ಸಂಶಯಗಳನ್ನು, ತಪ್ಪು ಮಾಹಿತಿ ಹರಡಲಾಗುತ್ತಿದೆ, ನೋಂದಣಿ ಮಾಡಿದವರೆಲ್ಲರಿಗೂ ಲಸಿಕೆ ದೊರಕುತ್ತದೆ. ಮಾಹಿತಿ ಬಂದ ಮೇಲಷ್ಟೇ ಹೋಗಿ. ಎರಡನೇ ಡೋಸ್ ಪಡೆದುಕೊಳ್ಳುವವರಿಗೆ ಪ್ರಥಮ ಆದ್ಯತೆ. ಆತಂಕ ಪಡುವ ಅಗತ್ಯ ಇಲ್ಲ. ಆಸ್ಪತ್ರೆಗೆ ಧಾವಿಸುವ ಅಗತ್ಯವಿಲ್ಲ. ಎಲ್ಲರಿಗೂ ಲಸಿಕೆ ಒದಗಿಸಲಾಗುತ್ತದೆ. ಟಾಸ್ಕ್ ಫೋರ್ಸ್ ಇದನ್ನು ಜನರಿಗೆ ವಿವರಿಸಬೇಕು ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.
ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಯಿ, ಉಪಾಧ್ಯಕ್ಷೆ ಜ್ಯೋತಿ ಎಸ್.ನಾಯಕ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್ ಆರ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ, ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ,ಪಂಚಾಯತ್ ಪಿ.ಡಿ.ಒ.ಸಂಧ್ಯಾ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಗ್ರಾಮ ಕರಣಿಕೆ ಯಶ್ವಿತ, ಶಾಸಕರ ಟಾಸ್ಕ್ ಫೋರ್ಸ್ ಸಮಿತಿ ಪ್ರಮುಖರಾದ ದೇವಪ್ಪ ಪೂಜಾರಿ , ರಮನಾಥ ರಾಯಿ , ಯಶೋಧರ ಕರ್ಬೆಟ್ಟು, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.