ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ನಿರಂತರ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ…
ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ನಿರಂತರವಾಗಿ ನಡೆಯುತ್ತಿದೆ. ಕೋವಿಡ್-19 ರ ಪಿಡುಗಿನಿಂದುಂಟಾದ ಅನಿಶ್ಚಿತತೆಯ ನಡುವೆಯು 41 ಕಾರ್ಪೊರೇಟ್ ಸಂಸ್ಥೆಗಳು ಆನ್ ಲೈನ್ ಪರೀಕ್ಷೆಗಳ ಮತ್ತು ಸಂದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುತ್ತಿವೆ.
ಸಾಂಕ್ರಾಮಿಕ ರೋಗದಿಂದಾಗಿ ಕಂಪೆನಿಗಳಿಗೆ ಅಥವಾ ಫ್ಯಾಕ್ಟರಿಗಳಿಗೆ ವಿದ್ಯಾರ್ಥಿಗಳು ಹೋಗುವುದಕ್ಕಾಗದೆ ಆನ್ ಲೈನ್ ಮೂಲಕ ಇಂಟರ್ನ್‍ಶಿಪ್‍ಗಳನ್ನು ನಡೆಸಬೇಕಾದ ಅನಿವಾರ್ಯತೆ ಉಂಟಾಗಿದ್ದು, ಕಾಲೇಜು ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ಕಲ್ಪಿಸಿತ್ತು. ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳುವ ಕಂಪೆನಿಗಳೊಂದಿಗೆ ಕಾಲೇಜು ಉತ್ತಮ ಬಾಂಧವ್ಯವನ್ನು ಹೊಂದಿದ್ದು ಇದರಿಂದಾಗಿ ಕಂಪೆನಿಗಳು ಅಲ್ಲಿ ಇಂಟರ್ನ್‍ಶಿಪ್ ನಡೆಸುವುದಕ್ಕೆ ಆದ್ಯತೆಯನ್ನು ನೀಡಿದ್ದವು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆಯೂ ನೇಮಕಾತಿ ಹೆಚ್ಚುವುದಕ್ಕೆ ಕಾರಣವಾಗಿದೆ.
ನೇಮಕಾತಿಯ ವೇಗವನ್ನು ಹೆಚ್ಚಿಸುವುದಕ್ಕಾಗಿ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಪೂರಕ ತರಬೇತಿ, ಅಣಕು ಸಂದರ್ಶನಗಳನ್ನು ನಡೆಸುತ್ತಿದ್ದು ವಿದ್ಯಾರ್ಥಿಗಳಿಗೆ ಹೆಚ್ಚು ಸಹಕಾರಿಯಾಗಿದೆ. ವಾರ್ಷಿಕ 3.5 ಲಕ್ಷದಿಂದ 12 ಲಕ್ಷದವರೆಗೆ ವೇತನವನ್ನು ನೀಡುವ ಕಂಪೆನಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿವೆ.
ಲಾಕ್ ಡೌನ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನನುಕೂಲವಾಗದಂತೆ ಆನ್‍ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರುಗಳು ನಿರಂತರ ಸಂಪರ್ಕದಲ್ಲಿದ್ದು ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಗತ್ಯ ನೋಟ್ಸ್ ಗಳು , ಪೂರಕ ಪರಿಕರಗಳನ್ನು ಕಳುಹಿಸಲಾಗುತ್ತಿದೆ. ಒಟ್ಟಿನಲ್ಲಿ ಲಾಕ್‍ಡೌನ್ ಆದರೂ ಆನ್‍ಲೈನ್ ಪಾಠ ಹಾಗೂ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ ತಿಳಿಸಿದ್ದಾರೆ.
ಡಾ.ಮಹೇಶ್‍ಪ್ರಸನ್ನ ಕೆ