ಸಚಿವ ಸುಧಾಕರ್,ಸಂಸದ ತೇಜಸ್ವಿ ಸೂರ್ಯ, ಸತೀಶ್ ರೆಡ್ಡಿ ಮತಿತ್ತರರ ರಾಜೀನಾಮೆಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಾಹೀದ್ ಆಗ್ರಹ…
ಸುಳ್ಯ : ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡಿಸಿ ದಂಧೆಯಲ್ಲಿ ತೊಡಗಿಸಿಕೊಂಡಿರುವುದು ಶಾಸಕರ ಆಪ್ತರೆಂದು ಸಾಬೀತು ಆಗಿರುವುದರಿಂದ ಕೂಡಲೇ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ರಾಜೀನಾಮೆ ನೀಡಬೇಕೆಂದು ಕಾಂಗ್ರೇಸ್ ಮುಖಂಡ ಟಿ.ಎಂ.ಶಾಹೀದ್ ತೆಕ್ಕಿಲ್ ಒತ್ತಾಯಿಸಿದ್ದಾರೆ.
ಕೊರೋನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡಿಸಿ ಮಾರುತ್ತಿದ್ದ ಪ್ರಕರಣ ಸಂಬಂಧ ಬಂದಿತನಾದ ವ್ಯಕ್ತಿ ಬೊಮ್ಮನಹಳ್ಳಿ ವಿದಾನ ಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿಯವರ ಆಪ್ತರಾಗಿದ್ದಾರೆ. ಹಾಸಿಗೆ ಬ್ಲಾಕ್ ದಂಧೆ ಬಗ್ಗೆ ಮಾತನಾಡುವ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಎಂ.ಸತೀಶ್ ರೆಡ್ಡಿ , ಎಲ್.ಎ ರವಿ ಸುಬ್ರಮಣ್ಯ ಹಾಗೂ ಉದಯ್ ಗರುಡಾಚಾರ್ ರವರು ಬಿಬಿಎಂಪಿಯ ಉದ್ಯೋಗದಲ್ಲಿರುವ 16 ಮಂದಿ ಮುಸಲ್ಮಾನರ ಹೆಸರನ್ನು ಹೇಳಿ ಅವರನ್ನು ನೌಕರಿಯಿಂದ ವಜಾ ಮಾಡಿಸಿ ಇಡೀ ಮುಸ್ಲಿಂ ಸಮಾಜಕ್ಕೆ ಕೆಟ್ಟ ಹೆಸರು ಬರುವ ಹಾಗೆ ಮಾಡಿದ್ದು ನಾಚಿಕೆಗೇಡಿನ ವಿಷಯವಾಗಿದೆ. ಇದೀಗ ಬಿಜೆಪಿ ಯ ಕಾರ್ಯಕರ್ತರು ಹಾಗೂ ಶಾಸಕರ ಆಪ್ತರು ಈ ದಂಧೆಯಲ್ಲಿ ತೊಡಗಿಸಿಕೊಂಡಿರುವುದು ಸಾಬೀತು ಆಗಿರುವುದರಿಂದ ಕೂಡಲೇ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಾಹೀದ್ ತೆಕ್ಕಿಲ್ ಒತ್ತಾಯಿಸಿದ್ದಾರೆ.
ಪೆಟ್ರೋಲ್, ಡೀಸಲ್, ಆಹಾರ ಪದಾರ್ಥಗಳ ಬೆಲೆಯು ದಿನ ನಿತ್ಯ ಏರಿಕೆಯಾಗುತ್ತಿದ್ದು ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಇದಕ್ಕೆ ಕೇಂದ್ರ ಸರಕಾರದ ಅಸಂಬದ್ಧ ಆರ್ಥಿಕ ನೀತಿಯೇ ಕಾರಣ. ಕೊರೋನಾ ಸಾಂಕ್ರಾಮಿಕ ರೋಗ ನಿವಾರಣೆಯಲ್ಲಿ ವಿಫಲವಾದ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್,ಮತ್ತು ಆಹಾರ ಪದಾರ್ಥಗಳ ಬೆಲೆಯನ್ನು ದಿನ ನಿತ್ಯ ಏರಿಕೆ ಮಾಡುವುದರಿಂದ ಬಡವರು ಹಾಗೂ ಜನಸಾಮಾನ್ಯರ ಬದುಕಿಗೆ ಕೊಳ್ಳಿ ಇಟ್ಟಿದ್ದಾರೆ. ಪಂಚ ರಾಜ್ಯ ಚುನಾವಣೆಯ ಸಂದರ್ಭ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯನ್ನು ತಡೆ ಹಿಡಿದಿದ್ದ ಕೇಂದ್ರ ಸರಕಾರವು ಕೊರೋನಾ ಸಂದರ್ಭದಲ್ಲಿ ಏಕೆ ತಡೆ ಹಿಡಿಯಲಿಲ್ಲ ಎಂದೂ ಟಿ.ಎಂ.ಶಾಹೀದ್ ಪ್ರಶ್ನಿಸಿದ್ದಾರೆ.