ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವತಿಯಿಂದ ವೆಬಿನಾರ್…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ಅಡ್ವಾನ್ಸಡ್ ಫಂಕ್ಷನಲ್ ವೆರಿಫಿಕೇಷನ್ ಇನ್ VLSI ‘ ಎಂಬ ವಿಷಯದಲ್ಲಿ ಮೇ.29 ರಂದು ವೆಬಿನಾರ್ ನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಟ್ರಿಡೆಂಟ್ ಟೆಕ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ನ ಕಿಶೋರ್ ಎಂ.ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಉಪಸ್ಥಿತರಿದ್ದರು. ಎಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಪ್ರೊ. ಗಂಗಾಧರ, ಕಾರ್ಯಕ್ರಮ ಸಂಯೋಜಕ ಪ್ರೊ. ಭರತೇಶ್ ಸೇರಿದಂತೆ ವಿಭಾಗದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರೊ.ನಾಝಿಯಾ ಕಾರ್ಯಕ್ರಮ ನಿರೂಪಿಸಿದರು.
ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್‌ಟಿಇ) ಸಹಯೋಗದೊಂದಿಗೆ ಈ ವೆಬಿನಾರ್ ನ್ನು ಏರ್ಪಡಿಸಲಾಗಿತ್ತು.