ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವತಿಯಿಂದ ವೆಬಿನಾರ್…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ABCD ಆಫ್ ನೆಕ್ಸ್ಟ್ ಜನರೇಶನ್ ಟೆಕ್ನಾಲಜೀಸ್ ‘ ಎಂಬ ವಿಷಯದಲ್ಲಿ ಜೂ. 5 ರಂದು ವೆಬಿನಾರ್ ನ್ನು ಆಯೋಜಿಸಲಾಗಿತ್ತು.
ಮಂಗಳೂರು ಇನ್ಫೋಸಿಸ್ ಕಂಪೆನಿಯ ಲೀಡ್ ವಿಪಿನ್ ಕುಮಾರ್ ನಿಟ್ಟೂರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ತಂತ್ರಜ್ಞಾನದ ವಿಕಸನ, ಭವಿಷ್ಯದ ತಾಂತ್ರಿಕ ಬದಲಾವಣೆಗಳ ಬಗ್ಗೆ ವಿಪಿನ್ ಕುಮಾರ್ ನಿಟ್ಟೂರ್ ಮಾಹಿತಿ ನೀಡಿದರು.
ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥ ಡಾ. ವೆಂಕಟೇಶ್ ಶಂಕರ್, ವಿಭಾಗದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನೇಹಾ ಸ್ವಾಗತಿಸಿದರು. ತಾಜುನ್ನೀಸಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಮೇಘನಾ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.