ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರೋಧಿಸಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಪ್ರತಿಭಟನೆ…

ಸುಳ್ಯ : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರೋಧಿಸಿ ಕೆಪಿಸಿಸಿ ಸೂಚನೆಯಂತೆ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಸುಳ್ಯದ ಗಾಂಧಿನಗರ, ಖಾಸಗಿ ಬಸ್ಸು ನಿಲ್ದಾಣದ ಬಳಿಯ ಪೆಟ್ರೋಲ್ ಪಂಪ್, ಹಳೇಗೇಟು, ಒಡಬಾಯಿ ಹಾಗು ಪೈಚಾರು ಪೆಟ್ರೋಲ್ ಪಂಪ್ ಎದುರು *100 ನಾಟೌಟ್* ಪ್ರತಿಭಟನೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಾಂಗಾಯ, ಡಿಸಿಸಿ ಉಪಾಧ್ಯಕ್ಷರಾದ ಜಯಪ್ರಕಾಶ್ ರೈ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಾಹಿದ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಪೆಟ್ರೋಲ್ ಗ್ರಾಹಕರಿಗೆ ಮತ್ತು ಪ್ರಯಾಣಿಕರಿಗೆ ಸಿಹಿತಿಂಡಿ ಹಂಚಿ ವಿನೂತನವಾಗಿ ಪ್ರತಿಭಾತಿಸಲಾಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಹಾಗು ಪ್ರಮುಖ ನಾಯಕರು ಉಪಸ್ಥಿತರಿದ್ದರು.

Related Articles

Back to top button