ನಾಳೆಯಿಂದ ದ.ಕ ಜಿಲ್ಲೆಯ ಎಲ್ಲಾ ಅಂಗಡಿಗಳು ಓಪನ್….
ಮಂಗಳೂರು: ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇಲ್ಲಿಯ ವ್ಯಾಪಾರಸ್ಥರು ಕಷ್ಟಪಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಅದರಂತೆ ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದೆ. ಬೆ.7 ಗಂಟೆಯಿಂದ ಮ.2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಬಹುದು. ಆದರೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊಡಡಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸಂಸದ ನಳಿನ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.