ರಾಜೀವ್ ಯುವ ಪ್ರತಿಷ್ಠಾನ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಟಿ.ಎಂ.ಶಾಹಿದ್ ತೆಕ್ಕಿಲ್ ನೇಮಕ…..

ರಾಜೀವ್ ಯುವ ಪ್ರತಿಷ್ಠಾನ ಇದರ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಟಿ. ಎಂ. ಶಾಹಿದ್ ತೆಕ್ಕಿಲ್ ಇವರನ್ನು ರಾಜೀವ್ ಯುವ ಪ್ರತಿಷ್ಠಾನ ರಾಷ್ಟ್ರೀಯ ಅಧ್ಯಕ್ಷರಾದ ಆರ್. ಪರಾಂಬನ್ ಅವರು ನೇಮಕಗೊಳಿಸಿರುತ್ತಾರೆ. ಇವರು ಸುಳ್ಯ ತಾಲ್ಲೂಕು, ದ. ಕ ಜೆಲ್ಲೆ ಹಾಗು ಕರ್ನಾಟಕ ರಾಜ್ಯ ಎನ್. ಎಸ್. ಯು. ಐ ಘಟಕದ ಪ್ರಧಾನ ಕಾರ್ಯದರ್ಶಿ ಯಾಗಿ ಯುವ ಕಾಂಗ್ರೆಸ್ಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕೆ. ಪಿ. ಸಿ. ಸಿ ಯ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿರುತ್ತಾರೆ.

ಮಂಗಳೂರು ವಿಶ್ವ ವಿದ್ಯಾ ನಿಲಯದ ವಿದ್ಯಾರ್ಥಿ ಯೂನಿಯನ್ ನ ಉಪಾಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವಶಕ್ತಿ ಮತ್ತು ಗ್ರಾಮೀಣಾಭಿವೃದ್ಧಿ ಸಂಘಟನೆಯ ಜಿಲ್ಲಾದ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿರುದ್ದಿ ನಿಗಮದ ನಿರ್ದೇಶಕರಾಗಿ ಹಾಗು ಎರಡು ಬಾರಿ ಭಾರತ ಸರಕಾರದ ನಾರು ಮಂಡಳಿಯ ಸದಸ್ಯರಾಗಿ, ಸ್ಮಾರ್ಟ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ದುಡಿದಿದ್ದು ಹಲವು ಮಸೀದಿ, ಮದರಸ, ಮತ್ತು ಸಂಘ ಸಂಸ್ಥೆಗಳ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಇವರು ರಾಜಕೀಯ, ಸಾಮಾಜಿಕ, ಧಾರ್ಮಿಕ, ಶಿಕ್ಷಣ, ಸಹಕಾರ ಮತ್ತು ಕ್ರೀಡಾ ಕ್ಷೇತ್ರ ದಲ್ಲಿ ತಮ್ಮನು ತೊಡಗಿಸಿಕೊಂಡಿರುತ್ತಾರೆ. ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆ, ತೆಕ್ಕಿಲ್ ಸಮುದಾಯಭವನದ ಸ್ಥಾಪಕಾಧ್ಯಕ್ಷ ರಾಗಿರುತ್ತಾರೆ. ಮತ್ತು ತೆಕ್ಕಿಲ್ ಹೆಚ್. ಪಿ. ಗ್ಯಾಸ್ ನ ಮಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಪ್ರತಿಷ್ಠಿತ ತೆಕ್ಕಿಲ್ ಮನೆತನದವರಾಗಿದ್ದರೆ.

Sponsors

Related Articles

Leave a Reply

Your email address will not be published. Required fields are marked *

Back to top button