ಕಡಬ-ಕಾರುಗಳ ಮುಖಾಮುಖಿ ಡಿಕ್ಕಿ, ಒಬ್ಬನಿಗೆ ಗಂಭೀರ ಗಾಯ…

ಉಪ್ಪಿನಂಗಡಿ: ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ಕುಂಡಾಜೆ ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡು, ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ನಡೆದಿದೆ.
ಗಂಭೀರವಾಗಿ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಪ್ಪಿನಂಗಡಿ ಮೂಲದವರನ್ನು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಗಣರಾಜ್ ಕುಂಬ್ಳೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.