ಜುಲೈ 19-22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ…

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ ಎಲ್.ಸಿ ಮಕ್ಕಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ 8.76 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 7306 ಪರೀಕ್ಷಾ ಕೇಂದ್ರಗಳನ್ನೂ 6 ಸ್ಥಾಪಿಸಲಾಗಿದೆ. ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ‌ ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಚರ್ಚಿಸಲಾಗಿದೆ. ಸಮಾಜವಿಜ್ಞಾನ, ವಿಜ್ಞಾನ ಹಾಗೂ ಗಣಿತದ ಒಂದು ಪತ್ರಿಕೆ ಹಾಗೂ ಕನ್ನಡ ಹಿಂದಿ‌‌ ಇಂಗ್ಲೀಷ್ ಸೇರಿ‌ ಒಂದು ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Sponsors

Related Articles

Back to top button