ಧನಂಜಯ ಅಡ್ಪಂಗಾಯ ನೇಮಕ…
ಸುಳ್ಯ: ಕೆಪಿಸಿಸಿ ಯ ಸಹಾಯ ಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಯಾಗಿ ಧನಂಜಯ ಅಡ್ಪಂಗಾಯ ನೇಮಕವಾಗಿದ್ದಾರೆ.
ಯುವ ಕಾಂಗ್ರೇಸ್ ಅಧ್ಯಕ್ಷರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ,ರಾಜ್ಯ ಉಪಾಧ್ಯಕ್ಷರಾಗಿ, ದ.ಕ.ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಅಕ್ರಮ- ಸಕ್ರಮ ಸದಸ್ಯರಾಗಿ, ದ.ಕ. ಜಿಲ್ಲಾ ಪಂಚಾಯತ್ ಸದಸ್ಯರಾಗಿ, ದ.ಕ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ, ಅಜ್ಜವಾರ ಗ್ರಾಮದ ಕರ್ಲಂಪಾಡಿ ದೇವಸ್ಥಾನದ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಗೌಡ ವಿದ್ಯಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸುಳ್ಯದ ಪ್ರತಿಷ್ಠಿತ ಉದ್ಯಮಿ ಹಾಗೂ ಕಾಂಗ್ರೇಸ್ ಮುಖಂಡರಾದ ಧನಂಜಯ ಅಡ್ಪಂಗಾಯ ಅವರನ್ನು ಇದೀಗ ಕೆಪಿಸಿಸಿ ಯ ಸಹಾಯ ಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ನೇಮಕ ಗೊಳಿಸಿರುತ್ತಾರೆ.