ತುಂಬೆ ಡ್ಯಾಂ ಸಂತ್ರಸ್ತ ರೈತರ ದೀರ್ಘಕಾಲೀನ ಸಮಸ್ಯೆ ಪರಿಹರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಇವರಿಗೆ ಲಿಖಿತ ಮನವಿ…

ಮಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ತುಂಬೆ ಡ್ಯಾಂ ಸಂತ್ರಸ್ತರ ನೆನೆಗುದಿಗೆ ಬಿದ್ದ ಸಮಸ್ಯೆಯನ್ನು ಪರಿಹರಿಸುವಂತೆ ಲಿಖಿತ ಮನವಿಯನ್ನು ಜು. 13 ರಂದು ಸಲ್ಲಿಸಲಾಯಿತು.
ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡಲು ನೇತ್ರಾವತಿ ನದಿಗೆ ತುಂಬೆಯಲ್ಲಿ ಡ್ಯಾಂ ನಿರ್ಮಾಣ ಮಾಡಿ ನೀರು ಸಂಗ್ರಹಿಸಿ ಮುಳುಗಡೆ ಜಮೀನಿಗೆ ಕೇಂದ್ರ ಜಲ ಆಯೋಗದ ನಿರ್ದೇಶನದಂತೆ ವರತೆ ಪ್ರದೇಶಕ್ಕೆ ನ್ಯಾಯೋಚಿತ ಸೂಕ್ತ ಪರಿಹಾರ ಸಿಗದೇ ಇದ್ದು ಸಜೀಪಮುನ್ನೂರು, ಪಾಣೆಮಂಗಳೂರು, ನರಿಕೊಂಬು, ಬಂಟ್ವಾಳ, ಬಿ ಮೂಡ, ಕಳ್ಳಿಗೆ ಗ್ರಾಮಗಳ ನದಿತೀರದ ಇಕ್ಕೆಲದ ಯಾವುದೇ ರೈತರಿಗೆ ವರತೆ ಪ್ರದೇಶಕ್ಕೆ ಜಿಲ್ಲಾಡಳಿತ ಇಂದಿನತನಕ ನ್ಯಾಯೋಚಿತ ಸೂಕ್ತ ಪರಿಹಾರ ನೀಡದಿರುವ ಬಗ್ಗೆ ಸಂಸತ್ ಸದಸ್ಯರ ಗಮನಕ್ಕೆ ತರಲಾಯಿತು. ಮನವಿಗೆ ಸ್ಪಂದಿಸಿದ ಸಂಸದರು ರೈತರ ಹಿತಾಸಕ್ತಿಯನ್ನು ಕಾಪಾಡುವ ಭರವಸೆ ನೀಡಿದರು ಎಂದು ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷರಾದ ಎo ಸುಬ್ರಮಣ್ಯ ಭಟ್ ತಿಳಿಸಿದ್ದಾರೆ.