ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ನ. 27 ರಂದು ಪದವಿ ಪ್ರದಾನ ಸಮಾರಂಭ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 2020 – 21 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನ. 27 ರಂದು ನಡೆಯಲಿದೆ.
ಯೆನೆಪೋಯ ವಿಶ್ವವಿದ್ಯಾನಿಲಯದ ಸಹ ಉಪಕುಲಪತಿ ಡಾ. ಬಿ.ಎಚ್. ಶ್ರೀಪತಿ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಯೆನೆಪೋಯ ಆಬ್ದುಲ್ಲ ಕು೦ಞ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. 2020 – 21 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜಾ ಮತ್ತು ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ತಿಳಿಸಿದ್ದಾರೆ.

Related Articles

Back to top button