ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಡಿ ಕೆ ಶಿವಕುಮಾರ್, ಸಿದ್ಧರಾಮಯ್ಯ…

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡರು, ರಾಜ್ಯ ಸಭಾ ಸದಸ್ಯರಾದ ಶ್ರೀ ಆಸ್ಕರ್ ಫರ್ನಾಂಡೀಸ್ ಅವರು ಮಂಗಳೂರಿನ ಏನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್, ಧ್ರುವ ನಾರಾಯಣ, ಮಾಜಿ ಸಚಿವರಾದ ಶ್ರೀ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಎಐಸಿಸಿ ಕಾರ್ಯದರ್ಶಿಗಳಾದ ಐವನ್ ಡಿಸೋಜ, ಪಿ.ವಿ‌ ಮೋಹನ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ ಶಹೀದ್ ತೆಕ್ಕಿಲ್ ರವರು ಆಸ್ಪತ್ರೆಗೆ ಭೇಟಿ ಮಾಡಿ ಅವರ ಆರೋಗ್ಯದ ಸ್ಥಿತಿ ಕುರಿತು ಪತ್ನಿ ಬ್ಲೋಸಂ ಡಿಸೋಜ ಹಾಗೂ ವೈದ್ಯರೊಂದಿಗೆ ಚರ್ಚಿಸಿದರು.

F5d01b6c B6d5 4fdd B47d 06c5c7eebcc6 300x169

Related Articles