ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ವನಮಹೋತ್ಸವ ಆಚರಣೆ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ರಾಷ್ಟ್ರೀಯ ಸೇವಾಯೋಜನೆ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ವನಮಹೋತ್ಸವವನ್ನು ಜು. 23 ರಂದು ಆಚರಿಸಲಾಯಿತು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಅವರು ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಟ್ಟರು. ರಾಷ್ಟ್ರೀಯ ಸೇವಾಯೋಜನೆಯ ಘಟಕಾಧಿಕಾರಿ ಪ್ರೊ.ಶ್ರೀನಿವಾಸ ಗೌಡ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

F4708a41 964c 45c4 902e 5a9a00e4965e 300x169

548ba88a 237e 45eb A790 5d4f40b137d2 300x169

Related Articles